ಪಶುಪತಿ ಕುಮಾರ್ ಪಾರಸ್  
ದೇಶ

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ; NDA ಗೆ ಪಶುಪತಿ ಪಾರಸ್ ಗುಡ್ ಬೈ!

2024 ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಟಿಕೆಟ್ ನಿರಾಕರಿಸಿದ ನಂತರ ಪಾರಸ್ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಹೊಸ್ತಿಲಲ್ಲಿ ಬಿಜೆಪಿ- ಜೆಡಿಯು ನೇತೃತ್ವದ NDA ಮೈತ್ರಿಕೂಟ ತೊರೆದಿರುವುದಾಗಿ ಮಾಜಿ ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (RLGP) ಮುಖ್ಯಸ್ಥ ಪಶುಪತಿ ಕುಮಾರ್ ಪಾರಸ್ ಅವರು ಸೋಮವಾರ ಔಪಚಾರಿಕವಾಗಿ ಘೋಷಿಸಿದ್ದಾರೆ. ಇನ್ನು ಮುಂದೆ ಆರ್ ಎಲ್ ಜಿಪಿ ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ಮೈತ್ರಿಕೂಟದ ಭಾಗವಾಗಲ್ಲ ಎಂದು ಹೇಳಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಟಿಕೆಟ್ ನಿರಾಕರಿಸಿದ ನಂತರ ಪಾರಸ್ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಮತ್ತೊಂದೆಡೆ, ಅವರ ಸೋದರಳಿಯ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರಿಗೆ ಸಂಸತ್ ಚುನಾವಣೆಯಲ್ಲಿ ಐದು ಸ್ಥಾನಗಳನ್ನು ನೀಡಲಾಗಿತ್ತು.

ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪಾರಸ್, ಇನ್ನು ಮುಂದೆ ನಮಗೆ ಎನ್‌ಡಿಎ ಜೊತೆ ಯಾವುದೇ ಸಂಬಂಧವಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನಮಗೆ ಸೂಕ್ತ ಸ್ಥಾನಗಳನ್ನು ಹಂಚಿಕೆ ಮಾಡುವ ಮೈತ್ರಿಯೊಂದಿಗೆ ಹೋಗುವುದಾಗಿ ತಿಳಿಸಿದರು.

ಭವಿಷ್ಯದ ಯೋಜನೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸಲಾಗುವುದು. ಸದ್ಯಕ್ಕೆ ನಾವು ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳುವುದಾಗಿ ಘೋಷಿಸಿದ್ದೇವೆ ಎಂದರು.

ಈ ವರ್ಷದ ಜನವರಿಯಲ್ಲಿ 'ದಹಿ-ಚುರಾ ಭೋಜ್ (ಹಬ್ಬ) ಸಂದರ್ಭದಲ್ಲಿ, ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರು ಪಾರಾಸ್ ಅವರನ್ನು ಭೇಟಿ ಮಾಡಿದ್ದರು, ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಅಥವಾ ಮಹಾಮೈತ್ರಿಕೂಟದೊಂದಿಗೆ ಆರ್‌ಎಲ್‌ಜೆಪಿ ಕೈಜೋಡಿಸುವ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ