ಕೇಂದ್ರ ಸಚಿವ ಕಿರಣ್ ರಿಜಿಜು  
ದೇಶ

ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆ ಮುಸಲ್ಮಾನರ ವಿರುದ್ಧವಲ್ಲ, ಪೂರಕವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು

ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿರುವ ಕೆಲವು ನಿಬಂಧನೆಗಳು ವಕ್ಫ್ ಮಂಡಳಿಗಳಿಗೆ ಅಧಿಕಾರವನ್ನು ನೀಡಿದೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ. ಹಿಂದಿನ ತಪ್ಪುಗಳನ್ನು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ನವದೆಹಲಿ: ವಕ್ಫ್ ಕಾಯ್ದೆಯಲ್ಲಿನ ತಿದ್ದುಪಡಿಗಳು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ, ಬದಲಾಗಿ ಹಿಂದಿನ ತಪ್ಪುಗಳನ್ನು ಸರಿಪಡಿಸುವ ಉದ್ದೇಶವನ್ನು ಹೊಂದಿವೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಯಾರೊಬ್ಬರೂ ಬಲವಂತವಾಗಿ ಮತ್ತು ಏಕಪಕ್ಷೀಯವಾಗಿ ಯಾರೊಬ್ಬರ ಭೂಮಿಯನ್ನು ಕಸಿದುಕೊಳ್ಳಲು ಅವಕಾಶವಿಲ್ಲ ಎಂದು ಖಾತ್ರಿಪಡಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ.

ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿರುವ ಕೆಲವು ನಿಬಂಧನೆಗಳು ವಕ್ಫ್ ಮಂಡಳಿಗಳಿಗೆ ಅಧಿಕಾರವನ್ನು ನೀಡಿದೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ. ಹಿಂದಿನ ತಪ್ಪುಗಳನ್ನು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ವಕ್ಫ್ ತಿದ್ದುಪಡಿಯ ನಂತರ, ಒಂದು ಭೂಮಿಯನ್ನು ವಕ್ಫ್ ಆಸ್ತಿ ಎಂದು ಅನಿಯಂತ್ರಿತವಾಗಿ ಘೋಷಿಸಲಾಗುವುದಿಲ್ಲ ಎಂದು ಹೇಳಿದರು. ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಹಿಂಸಾತ್ಮಕವಾಗಿ ಮಾರ್ಪಟ್ಟಿರುವ ತಿದ್ದುಪಡಿಯ ವಿರುದ್ಧ ವಿವಿಧ ಮುಸ್ಲಿಂ ಗುಂಪುಗಳ ಪ್ರತಿಭಟನೆಗಳು ನಡೆಯುತ್ತಿವೆ.

ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆ ಸಿಕ್ಕಿತು. ಆಡಳಿತ ಪಕ್ಷ ಎನ್‌ಡಿಎ ಈ ಕಾನೂನನ್ನು ಅಲ್ಪಸಂಖ್ಯಾತರಿಗೆ ಪ್ರಯೋಜನಕಾರಿ ಎಂದು ಬಲವಾಗಿ ಸಮರ್ಥಿಸಿಕೊಂಡರೆ, ವಿರೋಧ ಪಕ್ಷಗಳು ಇದನ್ನು ಮುಸ್ಲಿಂ ವಿರೋಧಿ ಎಂದು ಬಣ್ಣಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!