ಮಾನಸ ಸರೋವರ 
ದೇಶ

ಕೈಲಾಸ ಮಾನಸ ಸರೋವರ ಯಾತ್ರೆ ಶೀಘ್ರ ಪುನರಾರಂಭ: ಭಾರತ

ಸಂಬಂಧಗಳನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.

ನವದೆಹಲಿ: ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಶೀಘ್ರದಲ್ಲೇ ಪುನರಾರಂಭಿಸುವ ಸಾಧ್ಯತೆ ಇದೆ ಮತ್ತು ಅದರ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು ಎಂದು ಗುರುವಾರ ಕೇಂದ್ರ ಸರ್ಕಾರ ಹೇಳಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಹಿ ಹಾಕಲಾದ ಒಪ್ಪಂದದ ಚೌಕಟ್ಟಿನಡಿಯಲ್ಲಿ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.

"ಕೈಲಾಸ ಮಾನಸ ಸರೋವರ ಯಾತ್ರೆಯ ಕುರಿತು ನಾವು ಶೀಘ್ರದಲ್ಲೇ ಸಾರ್ವಜನಿಕ ಪ್ರಕಟಣೆ ಹೊರಡಿಸುತ್ತೇವೆ ಮತ್ತು ಶೀಘ್ರದಲ್ಲೇ ಯಾತ್ರೆಯನ್ನು ಪುನರಾರಂಭಿಸುವ ಸಾಧ್ಯತೆಯಿದೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿದ್ದಾರೆ.

"ಈ ವರ್ಷ ಯಾತ್ರೆ ನಡೆಯಲಿದೆ ಮತ್ತು ನಾವು ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ತಿಳಿಸುತ್ತೇವೆ" ಎಂದು ಅವರು ಹೇಳಿದ್ದಾರೆ.

2020ರ ಕೋವಿಡ್‌ ಬಳಿಕ ಟಿಬೆಟ್‌ನ ಕೈಲಾಸ ಪರ್ವತ ಮತ್ತು ಮಾನಸ ಸರೋವರಕ್ಕೆ ಭೇಟಿ ನೀಡುವ ಈ ಯಾತ್ರೆಯನ್ನು ಏಕಾಏಕಿ ಸ್ಥಗಿತಗೊಳಿಸಲಾಗಿತ್ತು. ಅಲ್ಲದೇ ಗಲ್ವಾನ್‌ ಘರ್ಷಣೆಯ ಬಳಿಕ ಬೀಜಿಂಗ್ ಮತ್ತು ನವದೆಹಲಿ ನಡುವಿನ ಮುನಿಸು ಮತ್ತೆ ಮುಂದುವರಿದಿತ್ತು. ಇದೀಗ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಲು ಭಾರತ ಹಾಗೂ ಚೀನಾ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ನಿರ್ಧರಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT