ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಪ್ರಿಯಕರನನ್ನು ಮನೆಗೆ ಕರೆಸಿ ಮರ್ಮಾಂಗ ಕತ್ತರಿಸಿ ಚಿತ್ರಹಿಂಸೆ ಕೊಟ್ಟ ಪ್ರಿಯತಮೆ!

ಪ್ರಿಯಕರ ಮಿಥುನ್ ಕುಮಾರ್ ನನ್ನು ಮನೆಗೆ ಕರೆಸಿಕೊಂಡ ಯುವತಿ ಮತ್ತು ಆಕೆಯ ನಾಲ್ವರು ಸಹೋದರರು ಸೇರಿ ಗುಪ್ತಾಂಗ ಕತ್ತರಿಸಿದ್ದಲ್ಲದೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶ: ಯುವತಿಯೊಬ್ಬಳು ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದಿದೆ.

ಪ್ರಿಯಕರ ಮಿಥುನ್ ಕುಮಾರ್ ನನ್ನು ಮನೆಗೆ ಕರೆಸಿಕೊಂಡ ಯುವತಿ ಮತ್ತು ಆಕೆಯ ನಾಲ್ವರು ಸಹೋದರರು ಸೇರಿ ಗುಪ್ತಾಂಗ ಕತ್ತರಿಸಿದ್ದಲ್ಲದೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕನ ಕುಟುಂಬದವರು ಇದನ್ನು ಲವ್ ಟ್ರ್ಯಾಪ್ ಎಂದು ಕರೆದಿದ್ದಾರೆ. ಎರಡು ಕುಟುಂಬಗಳ ನಡುವೆ ಈಗಾಗಲೇ ದ್ವೇಷವಿತ್ತು.

ಆದರೆ ಯುವತಿ ಆತ ತನ್ನ ಮನೆಗೆ ನುಗ್ಗಿದ್ದ, ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದ ಆಗ ಅನಿವಾರ್ಯವಾಗಿ ಈ ರೀತಿ ಮಾಡಬೇಕಾಯಿತು ಎಂದು ಹೇಳಿಕೆ ನೀಡಿದ್ದಾಳೆ. ಮಿಥುನ್ ಕುಮಾರ್ ಎಂಬಾತ ತನ್ನ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿದ್ದ.

ಆಕೆಯ ಆತನಿಗಿಂತ 8 ವರ್ಷ ದೊಡ್ಡವಳು. ಆಕೆ ಎರಡು ವರ್ಷಗಳಿಂದ ಮಿಥುನ್ ಜತೆ ಸಂಪರ್ಕದಲ್ಲಿದ್ದಾಳೆ. ಆತ ಹೊಲದಿಂದ ವಾಪಸಾಗುವಾಗ ಆಕೆ ಆತನಿಗೆ ಕರೆ ಮಾಡಿ ಭೇಟಿಯಾಗುವಂತೆ ತಿಳಿಸಿದ್ದಾಳೆ ಎಂದು ಮಿಥುನ್ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮಿಥುನ್‌ಗೆ ತಿಳಿಯದೆ ಅಲ್ಲಿಗೆ ಹೋಗಿದ್ದಾನೆ, ಆಗ ಯುವತಿಯ ನಾಲ್ವರು ಸಹೋದರರು ಅಲ್ಲೇ ಕಾಯುತ್ತಿದ್ದರು ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ಅವರು ಮಿಥುನ್​ನನ್ನು ಹಿಡಿದು, ನಿಂದಿಸಿ, ತೀವ್ರವಾಗಿ ಥಳಿಸಿದ್ದಾರೆ. ಸಹೋದರರು ಮಿಥುನ್‌ನ ಕೈ ಮತ್ತು ಕಾಲುಗಳನ್ನು ಕಟ್ಟಿದ್ದರು, ನಂತರ ಆಕೆ ಬ್ಲೇಡ್‌ನಿಂದ ಗುಪ್ತಾಂಗ ಕತ್ತರಿಸಿದ್ದಾಳೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಯಿತು, ನಂತರ ಆರೋಪಿಗಳು ಮಿಥುನ್‌ನನ್ನು ಮನೆಯಿಂದ ಹೊರಗೆ ಎಸೆದಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ನೋಡಿದ ಗ್ರಾಮಸ್ಥರೊಬ್ಬರು ಆತನ ತಂದೆಗೆ ಮಾಹಿತಿ ನೀಡಿದರು. ಬಸಂತ್ ಲಾಲ್ ತನ್ನ ಮಗನನ್ನು ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ಮಿಥುನ್ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಎರಡು ಕಡೆಯವರ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್