ಕಟ್ಟಡ ಕುಸಿತ 
ದೇಶ

ಈಶಾನ್ಯ ದೆಹಲಿಯ ಮುಸ್ತಫಾಬಾದ್ ನಲ್ಲಿ ಕಟ್ಟಡ ಕುಸಿತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಾಷ್ಟ್ರ ರಾಜಧಾನಿಯ ಮುಸ್ತಫಾಬಾದ್ ಪ್ರದೇಶದಲ್ಲಿ 20 ವರ್ಷ ಹಳೆಯ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ.

ನವದೆಹಲಿ: ಈಶಾನ್ಯ ದೆಹಲಿಯ ಶಕ್ತಿ ವಿಹಾರ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಬಹುಮಹಡಿ ವಸತಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಮತ್ತು 11 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಾಷ್ಟ್ರ ರಾಜಧಾನಿಯ ಮುಸ್ತಫಾಬಾದ್ ಪ್ರದೇಶದಲ್ಲಿ 20 ವರ್ಷ ಹಳೆಯ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್), ಅಗ್ನಿಶಾಮಕ ದಳ, ದೆಹಲಿ ಪೊಲೀಸರು ಮತ್ತು ಇತರ ಸ್ವಯಂಸೇವಕರ ತಂಡಗಳು 12 ಗಂಟೆಗಳಿಗೂ ಹೆಚ್ಚು ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

ನೆಲ ಮಹಡಿಯಲ್ಲಿರುವ "ಎರಡು-ಮೂರು ಅಂಗಡಿಗಳಲ್ಲಿ" ನಡೆಯುತ್ತಿದ್ದ ನವೀಕರಣ ಕಾರ್ಯ ಕಟ್ಟಡ ಕುಸಿತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸ್ ಮೂಲವೊಂದು ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

"ಮುಸ್ತಫಾಬಾದ್‌ನಲ್ಲಿ ಸಂಭವಿಸಿದ ದುರಂತದಿಂದ ತೀವ್ರ ದುಃಖವಾಗಿದೆ. ಘಟನೆಯ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ದೆಹಲಿ ಸಿಎಂ ಹೇಳಿದ್ದಾರೆ.

"ದುರದೃಷ್ಟಕರ ಅವಘಡದಲ್ಲಿ ಮಡಿದವರಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಗಳಿಗೆ ದೇವರು ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ" ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ