ಸಾಂದರ್ಭಿಕ ಚಿತ್ರ 
ದೇಶ

ಪೌಷ್ಟಿಕಾಂಶ ಆಹಾರಗಳಲ್ಲಿ ಸಂಸ್ಕರಿಸಿದ ಸಕ್ಕರೆ ಬಳಸಬೇಡಿ: ಕೇಂದ್ರ ಸರ್ಕಾರ

ಇದು ಭವಿಷ್ಯದಲ್ಲಿ ಅವರನ್ನು ಬೊಜ್ಜು, ಮಧುಮೇಹ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುವುದರ ಜೊತೆಗೆ ಅವರಿಗೆ ಒಳ್ಳೆಯ ಆಹಾರವನ್ನು ಸೇವಿಸುವುದಕ್ಕೆ ಉತ್ತೇಜನ ನೀಡುತ್ತದೆ.

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಮಕ್ಕಳು, ಗರ್ಭಿಣಿಯರು, ಎಳೆ ಮಕ್ಕಳಿಗೆ ಹಾಲುಣಿಸುವ ತಾಯಂದಿರು ಮತ್ತು ಹದಿಹರೆಯದ ಹೆಣ್ಣುಮಕ್ಕಳಿಗೆ ನೀಡಲಾಗುವ ಪೂರಕ ಪೌಷ್ಟಿಕಾಂಶ ಆಹಾರಗಳಲ್ಲಿ ಸಂಸ್ಕರಿಸಿದ ಸಕ್ಕರೆ, ಕೊಬ್ಬು, ಉಪ್ಪು ಮತ್ತು ಸಕ್ಕರೆ (HFSS) ಅಧಿಕವಾಗಿರುವ ಆಹಾರಗಳು, ಸಂರಕ್ಷಕಗಳು, ಬಣ್ಣಗಳು ಮತ್ತು ಸುವಾಸನೆಗಳನ್ನು ಬಳಸದಂತೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (WCD) ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಕ್ಕಳು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮತ್ತು ಬಾಲಕಿಯರಿಗೆ ನೀಡಲಾಗುವ ಟೇಕ್ ಹೋಮ್ ರೇಷನ್ಸ್ (THR) ಮತ್ತು ಬಿಸಿ-ಬೇಯಿಸಿದ ಊಟ (HCM) ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ, ಉಪ್ಪು ಮತ್ತು ಇತರ ವಸ್ತುಗಳನ್ನು ಒಳಗೊಂಡಿರುವುದನ್ನು ಕಂಡುಕೊಂಡ ನಂತರ ಈ ಸೂಚನೆ ನೀಡಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಹೊರಡಿಸಿದ ವಿವರವಾದ ಸಲಹೆಯ ಪ್ರತಿಯು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದೆ. ಮಿಷನ್ ಪೋಷನ್ 2:0 ಅಡಿಯಲ್ಲಿ ವಿವಿಧ ವರ್ಗದ ಫಲಾನುಭವಿಗಳಿಗೆ ಹೆಚ್ ಸಿಎಂ ಮತ್ತು ಟಿಹೆಚ್ ಆರ್ ನ್ನು ಒದಗಿಸುವಾಗ, ರಾಜ್ಯಗಳು ಸಂಸ್ಕರಿಸಿದ ಸಕ್ಕರೆಯನ್ನು ಬಳಸಬಾರದು, ಅಗತ್ಯವಿದ್ದರೆ ಸಿಹಿಗೊಳಿಸಲು ಬೆಲ್ಲವನ್ನು ಮಾತ್ರ ಬಳಸಬೇಕು ಎಂದು ಹೇಳಿದೆ.

ಅತಿಯಾದ ಕ್ಯಾಲೋರಿ ಸೇವನೆಯನ್ನು ತಪ್ಪಿಸಲು ಒಟ್ಟು ಶಕ್ತಿಯ ಶೇಕಡಾ 5ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಬೆಲ್ಲವನ್ನು ಸೇರಿಸಬೇಕು ಎಂದು ಡಬ್ಲ್ಯುಸಿಡಿ ಉಪ ಕಾರ್ಯದರ್ಶಿ ಜ್ಯೋತಿಕಾ ಅವರು ಹೊರಡಿಸಿದ ಸಲಹೆಯಲ್ಲಿ ತಿಳಿಸಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತೀಯರಿಗೆ ಆಹಾರ ಮಾರ್ಗಸೂಚಿಗಳು ಶಿಫಾರಸು ಮಾಡಿದಂತೆ ಎಲ್ಲಾ ವಯಸ್ಸಿನವರಿಗೆ ಕೊಬ್ಬು, ಉಪ್ಪು ಮತ್ತು ಸಕ್ಕರೆ (HFSS) ಅಧಿಕವಾಗಿರುವ ಆಹಾರಗಳ ಬಳಕೆಯನ್ನು ತಪ್ಪಿಸಬೇಕು. ಉಪ್ಪಿನ ಬಳಕೆಯನ್ನು ಸೀಮಿತಗೊಳಿಸಬಹುದು ಎಂದು ತಿಳಿಸಲಾಗಿದೆ.

ಫಲಾನುಭವಿಗಳು ತಮ್ಮ ಆದ್ಯತೆಗೆ ಅನುಗುಣವಾಗಿ ಅವುಗಳನ್ನು ಬಳಸಲು ಸಾಧ್ಯವಾಗುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉಪ್ಪು ಮತ್ತು ಸಕ್ಕರೆಯನ್ನು ಸೇರಿಸದೆ ಟಿಹೆಚ್ ಆರ್ ಪಾಕವಿಧಾನಗಳನ್ನು ವಿನ್ಯಾಸಗೊಳಿಸುವುದನ್ನು ಪರಿಗಣಿಸಬಹುದು ಎಂದು ಸಚಿವಾಲಯ ಹೇಳಿದೆ.

ಸಾರ್ವಜನಿಕ ಆರೋಗ್ಯ ಪೌಷ್ಟಿಕಾಂಶ ತಜ್ಞೆ ನೀಲಮಣಿ ಸಿಂಗ್ ಅವರ ಪ್ರಕಾರ, ಮಿಷನ್ ಪೋಷನ್ 2.0 ಅಡಿಯಲ್ಲಿ ಟೇಕ್ ಹೋಮ್ ಪಡಿತರದಿಂದ ಸಕ್ಕರೆಯನ್ನು ತೆಗೆದುಹಾಕಲು ಸರ್ಕಾರ ಮುಂದಾಗಿರುವುದು ಮಕ್ಕಳಿಗೆ ಜೀವನದಲ್ಲಿ ಆರೋಗ್ಯಕರ ಆರಂಭವನ್ನು ನೀಡುವ ಪ್ರಯತ್ನವಾಗಿದೆ. ಇದು ಭವಿಷ್ಯದಲ್ಲಿ ಅವರನ್ನು ಬೊಜ್ಜು, ಮಧುಮೇಹ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುವುದರ ಜೊತೆಗೆ ಅವರಿಗೆ ಒಳ್ಳೆಯ ಆಹಾರವನ್ನು ಸೇವಿಸುವುದಕ್ಕೆ ಉತ್ತೇಜನ ನೀಡುತ್ತದೆ. ಈ ವಿಷಯದ ಬಗ್ಗೆ ಸಚಿವೆ ಅನ್ನಪೂರ್ಣ ದೇವಿಗೆ ಹಲವಾರು ಪತ್ರಗಳನ್ನು ಬರೆದಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT