ಕಟ್ಟಡ ಕುಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯ  
ದೇಶ

ಈಶಾನ್ಯ ದೆಹಲಿಯ ಮುಸ್ತಾಫಾಬಾದ್ ನಲ್ಲಿ ಕಟ್ಟಡ ಕುಸಿತ: ನಾಲ್ವರು ಸಾವು; Video

ಬೆಳಗಿನ ಜಾವ 3.02 ರ ಸುಮಾರಿಗೆ ದಯಾಳ್‌ಪುರ ಪೊಲೀಸ್ ಠಾಣೆಯಲ್ಲಿ ಕಟ್ಟಡ ಕುಸಿದ ಬಗ್ಗೆ ಮಾಹಿತಿ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಈಶಾನ್ಯ ದೆಹಲಿಯ ಶಕ್ತಿ ವಿಹಾರ್ ಪ್ರದೇಶದ ಮುಸ್ತಾಫಾಬಾದ್ ನಲ್ಲಿ ಶನಿವಾರ ಬೆಳಗಿನ ಜಾವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ.

ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ. ಕಟ್ಟಡ ಕುಸಿದ ಸ್ಥಳದಲ್ಲಿ ಸುಮಾರು 11 ಜನರನ್ನು ರಕ್ಷಿಸಲಾಗಿದೆ.

ಸುಮಾರು 8-10 ಜನರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ನಂಬಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಈಶಾನ್ಯ) ಸಂದೀಪ್ ಲಾಮಾ ತಿಳಿಸಿದ್ದಾರೆ.

ಬೆಳಗಿನ ಜಾವ 3.02 ರ ಸುಮಾರಿಗೆ ದಯಾಳ್‌ಪುರ ಪೊಲೀಸ್ ಠಾಣೆಯಲ್ಲಿ ಕಟ್ಟಡ ಕುಸಿದ ಬಗ್ಗೆ ಮಾಹಿತಿ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ಮತ್ತು ಆಂಬ್ಯುಲೆನ್ಸ್ ಸೇವೆಗಳ ರಕ್ಷಣಾ ತಂಡಗಳು ತಕ್ಷಣ ಕಾರ್ಯಪ್ರವೃತ್ತವಾಗಿವೆ.

ಕಟ್ಟಡ ಕುಸಿದಾಗ ಸುಮಾರು 22 ಜನರು ಅವಶೇಷಗಳಡಿ ಸಿಲುಕಿದ್ದರು ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi Building Collapse: ಸಾವಿನ ಸಂಖ್ಯೆ 3ಕ್ಕೆ ಏರಿಕೆ; 9 ಮಂದಿ ರಕ್ಷಣೆ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!

43ನೇ ವಯಸ್ಸಿನಲ್ಲಿ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕೋಟ್ಯಾಧಿಪತಿ ಇಘೋ ಉಬಿರಿಬೊ ಸಾವು!

Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!