ಎಲಾನ್ ಮಸ್ಕ್-ನರೇಂದ್ರ ಮೋದಿ TNIE
ದೇಶ

ಈ ವರ್ಷದ ಕೊನೆಯಲ್ಲಿ ಬರ್ತೀನಿ: ಭಾರತ ಭೇಟಿ ಬಗ್ಗೆ ಮತ್ತೆ ಮಾಹಿತಿ ನೀಡಿದ DOGE ಅಧ್ಯಕ್ಷ Elon Musk

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ ನಂತರ ಮಸ್ಕ್ ಈ ಮಾಹಿತಿಯನ್ನು ನೀಡಿದರು. ಈ ವರ್ಷ ಭಾರತದಲ್ಲಿ ಟೆಸ್ಲಾವನ್ನು ಬಿಡುಗಡೆ ಮಾಡಲು ಮಸ್ಕ್ ಸಿದ್ಧತೆ ನಡೆಸುತ್ತಿದ್ದಾರೆ.

ನವದೆಹಲಿ: ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ ಎಂದು ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಹೇಳಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ ನಂತರ ಮಸ್ಕ್ ಈ ಮಾಹಿತಿಯನ್ನು ನೀಡಿದರು. ಈ ವರ್ಷ ಭಾರತದಲ್ಲಿ ಟೆಸ್ಲಾವನ್ನು ಬಿಡುಗಡೆ ಮಾಡಲು ಮಸ್ಕ್ ಸಿದ್ಧತೆ ನಡೆಸುತ್ತಿದ್ದಾರೆ. ಇತ್ತೀಚೆಗೆ, ಟೆಸ್ಲಾ ಮುಂಬೈ ಮತ್ತು ದೆಹಲಿಯಲ್ಲಿ ಶೋ ರೂಂಗಾಗಿ ಜಾಗವನ್ನು ಬಾಡಿಗೆಗೆ ಪಡೆದಿದೆ.

ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ, ಎಲೋನ್ ಮಸ್ಕ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ "ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡುವುದು ಗೌರವದ ಸಂಗತಿ. ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲು ನಾನು ಎದುರು ನೋಡುತ್ತಿದ್ದೇನೆ" ಎಂದು ಪೋಸ್ಟ್ ಮಾಡಿದ್ದಾರೆ.

ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ನಮ್ಮ ಸಭೆಯಲ್ಲಿ ಚರ್ಚಿಸಲಾದ ವಿಷಯಗಳನ್ನೂ ಒಳಗೊಂಡಂತೆ ಎಲೋನ್ ಮಸ್ಕ್ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಕಾರದ ಅಗಾಧ ಸಾಮರ್ಥ್ಯದ ಬಗ್ಗೆ ನಾವು ಚರ್ಚಿಸಿದ್ದೇವೆ. ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ತನ್ನ ಪಾಲುದಾರಿಕೆಯನ್ನು ಹೆಚ್ಚಿಸಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ಈ ವರ್ಷದ ಆರಂಭದಲ್ಲಿ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಎಲೋನ್ ಮಸ್ಕ್ ಅವರನ್ನು ಭೇಟಿಯಾದರು. ಆ ಸಭೆಯಲ್ಲಿ, ಮೋದಿ ಮತ್ತು ಮಸ್ಕ್ ಬಾಹ್ಯಾಕಾಶ ಪರಿಶೋಧನೆ, ಕೃತಕ ಬುದ್ಧಿಮತ್ತೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತೀಯ ಮತ್ತು ಅಮೇರಿಕನ್ ಸಂಸ್ಥೆಗಳ ನಡುವಿನ ಸಹಕಾರವನ್ನು ಬಲಪಡಿಸುವ ಬಗ್ಗೆ ಚರ್ಚಿಸಿದರು.

ಫೆಬ್ರವರಿ ಸಭೆಯ ನಂತರ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದ್ದು, "ಪ್ರಧಾನಿ ಮತ್ತು ಮಸ್ಕ್ ಅವರು ನಾವೀನ್ಯತೆ, ಬಾಹ್ಯಾಕಾಶ ಪರಿಶೋಧನೆ, ಕೃತಕ ಬುದ್ಧಿಮತ್ತೆ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಭಾರತೀಯ ಮತ್ತು ಅಮೇರಿಕನ್ ಸಂಸ್ಥೆಗಳ ನಡುವಿನ ಸಹಕಾರವನ್ನು ಬಲಪಡಿಸುವ ಬಗ್ಗೆ ಚರ್ಚಿಸಿದರು. ಅವರ ಚರ್ಚೆಗಳು ಉದಯೋನ್ಮುಖ ತಂತ್ರಜ್ಞಾನಗಳು, ಉದ್ಯಮಶೀಲತೆ ಮತ್ತು ಉತ್ತಮ ಆಡಳಿತದಲ್ಲಿ ಸಹಕಾರವನ್ನು ಗಾಢಗೊಳಿಸುವ ಅವಕಾಶಗಳನ್ನು ಸಹ ಒಳಗೊಂಡಿತ್ತು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT