ಜೆಡಿ ವ್ಯಾನ್ಸ್ ಮತ್ತು ಪ್ರಧಾನಿ ಮೋದಿ 
ದೇಶ

ಪ್ರಧಾನಿ ನಿವಾಸದಲ್ಲಿ ಮೋದಿ-ವ್ಯಾನ್ಸ್ ಮಾತುಕತೆ; ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಆದ್ಯತೆ

ಭಾರತ- ಅಮೆರಿಕದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಆಗಿರುವ "ಮಹತ್ವದ ಪ್ರಗತಿ"ಯನ್ನು ಪ್ರಧಾನಿ ಮೋದಿ ಮತ್ತು ಜೆಡಿ ವ್ಯಾನ್ಸ್ ಶ್ಲಾಘಿಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್, ಅವರ ಪತ್ನಿ ಉಷಾ ವ್ಯಾನ್ಸ್ ಮತ್ತು ಅವರ ಮೂವರು ಮಕ್ಕಳನ್ನು ತಮ್ಮ ಅಧಿಕೃತ ನಿವಾಸದಲ್ಲಿ ಸ್ವಾಗತಿಸಿದರು.

ಇಂದು ಸಂಜೆ ವ್ಯಾನ್ಸ್ ಕುಟುಂಬ, ರಾಷ್ಟ್ರ ರಾಜಧಾನಿಯಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸಕ್ಕೆ ಆಗಮಿಸಿತು. ನಂತರ ಅಮೆರಿಕ ಉಪಾಧ್ಯಕ್ಷರು, ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಭಾರತ- ಅಮೆರಿಕದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಆಗಿರುವ "ಮಹತ್ವದ ಪ್ರಗತಿ"ಯನ್ನು ಪ್ರಧಾನಿ ಮೋದಿ ಮತ್ತು ಜೆಡಿ ವ್ಯಾನ್ಸ್ ಶ್ಲಾಘಿಸಿದರು.

ಇಂಧನ, ರಕ್ಷಣೆ, ಕಾರ್ಯತಂತ್ರದ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿನ ಸಹಕಾರವನ್ನು ಹೆಚ್ಚಿಸಲು ನಡೆಯುತ್ತಿರುವ ನಿರಂತರ ಪ್ರಯತ್ನಗಳನ್ನು ಉಭಯ ನಾಯಕರು ಪರಿಶೀಲಿಸಿದರು ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪರಸ್ಪರ ಆಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಮೋದಿ ಮತ್ತು ವ್ಯಾನ್ಸ್ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಮುಂದಿನ ದಾರಿಯಾಗಿ ಮತ್ತಷ್ಟು ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಕರೆ ನೀಡಿದರು.

ಮಾತುಕತೆಯ ನಂತರ, ಪ್ರಧಾನ ಮಂತ್ರಿಯವರು ವ್ಯಾನ್ಸ್, ಅವರ ಭಾರತೀಯ ಮೂಲದ ಪತ್ನಿ ಉಷಾ ಚಿಲುಕುರಿ ಮತ್ತು ಉಪಾಧ್ಯಕ್ಷರೊಂದಿಗೆ ಇರುವ ಹಿರಿಯ ಯುಎಸ್ ಸರ್ಕಾರಿ ಅಧಿಕಾರಿಗಳ ನಿಯೋಗಕ್ಕೆ ಔತಣಕೂಟವನ್ನು ಆಯೋಜಿಸಲಾಗಿತ್ತು.

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ವ್ಯಾನ್ಸ್ ಅವರು ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಕುಟುಂಬ ಸಮೇತ ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ವ್ಯಾನ್ಸ್ ದಂಪತಿ ಹಾಗೂ ಮೂವರು ಮಕ್ಕಳು ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT