ಸಂಗ್ರಹ ಚಿತ್ರ 
ದೇಶ

ಜಾರ್ಖಂಡ್'ನಲ್ಲಿ ಎನ್‌ಕೌಂಟರ್: 5 ನಕ್ಸಲರು ಹತ

ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಪೊಲೀಸರು ಸೋಮವಾರ ನಡೆಸಿರುವ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

209 ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆ್ಯಕ್ಷನ್ (ಕೋಬ್ರಾ) ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಆರು ನಕ್ಸಲರು ಸಾವನ್ನಪ್ಪಿದ್ದು, ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು, ಒಂದು ಸೆಲ್ಫ್ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ವೇಳೆ ಯಾವುದೇ ಯಾವುದೇ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ