ಅಮಿತ್ ಶಾ online desk
ದೇಶ

ಕಾಶ್ಮೀರಕ್ಕೆ ಅಮಿತ್ ಶಾ ದೌಡು; ಉಗ್ರರನ್ನು ಬೇಟೆಯಾಡಲು ಪ್ರತಿಜ್ಞೆ

ಪ್ರಸ್ತುತ ಸೌದಿ ಅರೇಬಿಯಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಿದ್ದೇನೆ ಮತ್ತು ಭಯೋತ್ಪಾದಕ ದಾಳಿಯ ನಂತರ ಸಂಬಂಧಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರನ್ನು ಬೇಟೆಯಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ.

ಇಂದೇ ಶ್ರೀನಗರಕ್ಕೆ ತೆರಳುತ್ತಿರುವುದಾಗಿ ಮತ್ತು ಎಲ್ಲಾ ಭದ್ರತಾ ಪಡೆಗಳೊಂದಿಗೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ.

ಪ್ರಸ್ತುತ ಸೌದಿ ಅರೇಬಿಯಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಿದ್ದೇನೆ ಮತ್ತು ಭಯೋತ್ಪಾದಕ ದಾಳಿಯ ನಂತರ ಸಂಬಂಧಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

"ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಮತ್ತು ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ" ಎಂದು ಅಮಿತ್ ಶಾ 'X' ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಭಯೋತ್ಪಾದಕರು, ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಕನಿಷ್ಠಿ ಐವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!