ಪಹಲ್ಗಾಮ್‌ ಉಗ್ರ ದಾಳಿ 
ದೇಶ

Pahalgam attack: 'ಸಾಮಾನ್ಯ ಸ್ಥಿತಿ ಎಂಬ ಪೊಳ್ಳು ಹೇಳಿಕೆ'; ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ದಾಳಿ "ಅತ್ಯಂತ ಖಂಡನೀಯ ಮತ್ತು ಹೃದಯವಿದ್ರಾವಕ. ಇಡೀ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ" ಎಂದು ಹೇಳಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 10 ಜನ ಗಾಯಗೊಂಡಿದ್ದು, ಈ ದಾಳಿಯನ್ನು ಪ್ರತಿಪಕ್ಷ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಕ್ಷುಬ್ಧ ಪ್ರದೇಶದಲ್ಲಿ ಸಾಮಾನ್ಯ ಸ್ಥಿತಿ ಇದೆ ಎಂದು ಪದೇ ಪದೇ ಪೊಳ್ಳು ಭರವಸೆ ನೀಡುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ದಾಳಿ "ಅತ್ಯಂತ ಖಂಡನೀಯ ಮತ್ತು ಹೃದಯವಿದ್ರಾವಕ. ಇಡೀ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ" ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲಾಗಿದೆ ಎಂದು "ಪೊಳ್ಳು ಹೇಳಿಕೆ" ನೀಡುತ್ತಿದೆ. ಇದನ್ನು ಮೀರಿ ಮುಂದುವರಿಯುವಂತೆ ಸರ್ಕಾರಕ್ಕೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

"ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಪೊಳ್ಳು ಹೇಳಿಕೆ ನೀಡುವ ಬದಲು, ಸರ್ಕಾರ ಈಗ ಹೊಣೆಗಾರಿಕೆಯನ್ನು ತೆಗೆದುಕೊಂಡು ಭವಿಷ್ಯದಲ್ಲಿ ಇಂತಹ ಅನಾಗರಿಕ ಘಟನೆಗಳು ಸಂಭವಿಸದಂತೆ ಮತ್ತು ಅಮಾಯಕ ಭಾರತೀಯರು ಈ ರೀತಿ ಪ್ರಾಣ ಕಳೆದುಕೊಳ್ಳದಂತೆ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಇದೇ ಭಾವನೆಯನ್ನು ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸರಿಪಡಿಸುವ ಕ್ರಮಗಳ ಅಗತ್ಯವನ್ನು ಒತ್ತಿ ಹೇಳಿದ್ದಾರೆ ಮತ್ತು ಈ ದಾಳಿ "ಮಾನವೀಯತೆಯ ಮೇಲಿನ ಕಪ್ಪು ಚುಕ್ಕೆ" ಎಂದು ಖಂಡಿಸಿದ್ದಾರೆ.

"ಗಡಿಯಾಚೆಗಿನ ಭಯೋತ್ಪಾದನೆಯ ಪಿಡುಗಿನ ವಿರುದ್ಧ ಹೋರಾಡುವಲ್ಲಿ ಇಡೀ ರಾಷ್ಟ್ರವು ಒಗ್ಗಟ್ಟಾಗಿದೆ". "ಭಾರತದ ರಾಷ್ಟ್ರೀಯ ಭದ್ರತೆ ಅತ್ಯಂತ ಮುಖ್ಯ ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ" ಎಂದು ಖರ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

SCROLL FOR NEXT