ಯುಪಿಎಸ್ ಸಿ 
ದೇಶ

UPSC: ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ; ಶಕ್ತಿ ದುಬೆ ಪ್ರಥಮ, ಹರ್ಷಿತ್ ಗೋಯಲ್ ದ್ವಿತೀಯ, ಪರಾಗ್ ಗೆ 3ನೇ Rank!

ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು.

ನವದೆಹಲಿ: 2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಶಕ್ತಿ ದುಬೆ ಮೊದಲ Rank ಪಡೆದಿದ್ದಾರೆ.

ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಬರೋಡಾದ ಎಂಎಸ್ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿ ಪಡೆದಿರುವ ಹರ್ಷಿತಾ ಗೋಯಲ್ ಕೂಡಾ ರಾಜಕೀಯ ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು, 2ನೇ Rank ಪಡೆದುಕೊಂಡಿದ್ದಾರೆ.

ವೆಲ್ಲೂರಿನ VITಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿಟೆಕ್) ಹೊಂದಿರುವ ಡೋಂಗ್ರೆ ಅರ್ಚಿತ್ ಪರಾಗ್, ತತ್ವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತೀಯ ಆಡಳಿತ ಸೇವೆ IAS,ಭಾರತೀಯ ಪೊಲೀಸ್ ಸೇವೆ (IPS) ಭಾರತೀಯ ವಿದೇಶಾಂಗ ಸೇವೆ (IFS)ಮತ್ತಿತರ ಹುದ್ದೆಗಳಿಗೆ ಆಯ್ಕೆ ಮಾಡಲು UPSC ಪ್ರಿಲಿಮರಿ, ಮುಖ್ಯ ಮತ್ತು ಸಂದರ್ಶನ ಮೂರು ಹಂತದಲ್ಲಿ ಪರೀಕ್ಷೆ ನಡೆಸುತ್ತದೆ. ಕಳೆದ ವರ್ಷ ಜೂನ್ 16 ರಂದು ಪ್ರಿಲಿಮರಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ಒಟ್ಟು 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸೆಪ್ಟೆಂಬರ್ 2024 ರಲ್ಲಿ ನಡೆದ ಮುಖ್ಯ ಪರೀಕ್ಷೆಗೆ ಹಾಜರಾಗಲು ಒಟ್ಟು 14,627 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು.

ಈ ಪೈಕಿ 2,845 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಇವರಲ್ಲಿ 1,009 ಅಭ್ಯರ್ಥಿಗಳನ್ನು (725 ಪುರುಷರು ಮತ್ತು 284 ಮಹಿಳೆಯರು) ವಿವಿಧ ಸೇವೆಗಳಿಗೆ ನೇಮಕ ಮಾಡಲು ಆಯೋಗ ಶಿಫಾರಸು ಮಾಡಿದೆ. ಅಂತಿಮವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ, ಅಗ್ರ ಸ್ಥಾನ ಪಡೆದ ಐವರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT