ಯೋಗ ಗುರು ಬಾಬಾ ರಾಮ್‌ದೇವ್ Photo | PTI
ದೇಶ

ಯೋಗ ಗುರು ಬಾಬಾ ರಾಮ್‌ದೇವ್ 'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ದೆಹಲಿ ಹೈಕೋರ್ಟ್

ಇತ್ತೀಚೆಗಷ್ಟೇ ಪತಂಜಲಿಯ ಗುಲಾಬ್ ಶರಬತ್ ಪ್ರಚಾರದ ವೇಳೆ, ಹಮ್‌ದರ್ದ್ ಅವರ ರೂಹ್ ಅಫ್ಜಾದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ರಾಮದೇವ್ ಹೇಳಿದ್ದರು.

ನವದೆಹಲಿ: ಯೋಗ ಗುರು ಬಾಬಾ ರಾಮ್‌ದೇವ್ ಅವರು ಇತ್ತೀಚೆಗೆ ಹಮ್‌ದರ್ದ್ ಅವರ ರೂಹ್ ಅಫ್ಜಾ ಪಾನೀಯದ ಕುರಿತು ನೀಡಿದ್ದ 'ಶರಬತ್ ಜಿಹಾದ್' ಹೇಳಿಕೆಯು 'ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ಉಂಟು ಮಾಡಿದೆ' ಮತ್ತು ಇಂತಹ ಹೇಳಿಕೆಗಳು ಸಮರ್ಥನೀಯವಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಹಮ್‌ದರ್ದ್ ನ್ಯಾಷನಲ್ ಫೌಂಡೇಶನ್ ಇಂಡಿಯಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್ ಲಿಮಿಟೆಡ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, 'ಈ ಹೇಳಿಕೆಯು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಆಘಾತಗೊಳಿಸುವಂತಿದೆ. ಇಂತಹ ಹೇಳಿಕೆಗಳು ಸಮರ್ಥನೀಯವಲ್ಲ. ಈ ರೀತಿ ಮಾತನಾಡುವಾಗ ಗಮನವಿಟ್ಟುಕೊಳ್ಳುವಂತೆ ನಿಮ್ಮ ಕಕ್ಷಿದಾರರಿಗೆ ಹೇಳಿ. ಇಲ್ಲದಿದ್ದರೆ, ನ್ಯಾಯಾಲಯದಿಂದ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ.

ಇತ್ತೀಚೆಗಷ್ಟೇ ಪತಂಜಲಿಯ ಗುಲಾಬ್ ಶರಬತ್ ಪ್ರಚಾರದ ವೇಳೆ, ಹಮ್‌ದರ್ದ್ ಅವರ ರೂಹ್ ಅಫ್ಜಾದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ರಾಮದೇವ್ ಹೇಳಿದ್ದರು. ನಂತರ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ರಾಮದೇವ್, ತಾವು ಯಾವುದೇ ಬ್ರ್ಯಾಂಡ್ ಅಥವಾ ಸಮುದಾಯವನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ ಎಂದಿದ್ದರು.

ಹಮ್‌ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಈ ಪ್ರಕರಣವು ಅವಹೇಳನವನ್ನು ಮೀರಿದ್ದು, ಇದು ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ಇದು ದ್ವೇಷ ಭಾಷಣಕ್ಕೆ ಸಮನಾಗಿದೆ. 'ಶರಬತ್ ಜಿಹಾದ್' ಎಂದು ಅವರು ಹೇಳುತ್ತಾರೆ. ಅವರು ಅವರ ವ್ಯವಹಾರವನ್ನು ನೋಡಿಕೊಳ್ಳಲಿ. ನಮಗೇಕೆ ತೊಂದರೆ ನೀಡುತ್ತಿದ್ದಾರೆ?' ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT