ವ್ಯಕ್ತಿ ಬಂಧನ 
ದೇಶ

ಪಹಲ್ಗಾಮ್ ದಾಳಿ: ಪಾಕಿಸ್ತಾನ, ಲಷ್ಕರ್-ಎ-ತೊಯ್ಬಾಗೆ ಧನ್ಯವಾದ ಹೇಳಿದ ಜಾರ್ಖಂಡ್ ವ್ಯಕ್ತಿ ಬಂಧನ

ಈ ವ್ಯಕ್ತಿ ಆರ್‌ಎಸ್‌ಎಸ್ ಮತ್ತು ಬಜರಂಗದಳದಂತಹ ಹಿಂದೂ ಸಂಘಟನೆಗಳನ್ನು ಗುರಿಯಾಗಿಸಿ ದಾಳಿ ಮಾಡುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಿಕೊಂಡಿದ್ದಾನೆ.

ರಾಂಚಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಮತ್ತು ಲಷ್ಕರ್-ಎ-ತೊಯ್ಬಾಗೆ ಧನ್ಯವಾದ ಹೇಳಿದ ಆರೋಪದ ಮೇಲೆ ಜಾರ್ಖಂಡ್ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ನೌಶಾದ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಆರ್‌ಎಸ್‌ಎಸ್ ಮತ್ತು ಬಜರಂಗದಳದಂತಹ ಹಿಂದೂ ಸಂಘಟನೆಗಳನ್ನು ಗುರಿಯಾಗಿಸಿ ದಾಳಿ ಮಾಡುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಿಕೊಂಡಿದ್ದಾನೆ.

ಬೊಕಾರೊದ ಬಲಿದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಾ ನಗರದಲ್ಲಿ ಬುಧವಾರ ಈ ವ್ಯಕ್ತಿಯನ್ನು ಬಂಧಿಸಲಾಗಿದೆ.

ಮಂಗಳವಾರ ಮಧ್ಯಾಹ್ನ, ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ 28 ಜನರನ್ನು ಕೊಂದಿದ್ದಾರೆ. ದಾಳಿಯಲ್ಲಿ ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2019 ರ ಪುಲ್ವಾಮಾ ದಾಳಿಯ ನಂತರ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ ಎಂದು ಹಲವರು ಪರಿಗಣಿಸುತ್ತಾರೆ.

ಇಸ್ಲಾಮಿಕ್ ವಕೀಲ ಮತ್ತು ದಿಟ್ಟ ವಾಗ್ಮಿ ಎಂದು ಹೇಳಿಕೊಳ್ಳುವ ಆರೋಪಿ, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ 'ಕ್ವಾಸ್ಮಿ' ಹೆಸರಿನಲ್ಲಿ ವಿವಾದಾತ್ಮಕ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

"ಧನ್ಯವಾದಗಳು ಪಾಕಿಸ್ತಾನ, ಧನ್ಯವಾದಗಳು ಲಷ್ಕರ್-ಎ-ತೈಬಾ, ಅಲ್ಲಾಹನು ನಿಮ್ಮನ್ನು ಯಾವಾಗಲೂ ಆಶೀರ್ವದಿಸಲಿ. ಆಮೆನ್, ಆಮೆನ್. ಆರ್‌ಎಸ್‌ಎಸ್, ಬಿಜೆಪಿ, ಬಜರಂಗದಳ ಮತ್ತು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರೆ ನಾವು ಸಂತೋಷವಾಗಿರುತ್ತೇವೆ" ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!