ವಿನಯ್ ನರ್ವಾಲ್ ದಂಪತಿ 
ದೇಶ

ಪಹಲ್ಗಾಮ್ ಭಯೋತ್ಪಾದಕ ದಾಳಿ: 5 ದಿನಗಳ ಹಿಂದೆ ವಿವಾಹ; ಹನಿಮೂನ್ ಗೆ ತೆರಳಿದ್ದ ನೌಕಾಪಡೆ ಅಧಿಕಾರಿ ಬಲಿ

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್‌ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತ ಸಾವನ್ನಪ್ಪಿದ್ದಾರೆ. ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶ್ಮೀರಕ್ಕೆ ತೆರಳಿದ್ದರು.

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ನಂತರ ಅಲ್ಪ ರಜೆಗಾಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ವಿವಾಹ ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ.

ನರ್ವಾಲ್ ಕೇವಲ ಎರಡು ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದರು ಮತ್ತು ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಅವರ ಸಾವು ಅವರ ಕುಟುಂಬಕ್ಕೆ ಆಘಾತ ಬಡಿದಂತಾಗಿದೆ. ಅವರು 4 ದಿನಗಳ ಹಿಂದೆ ವಿವಾಹವಾಗಿದ್ದರು. ಎಲ್ಲರೂ ಸಂತೋಷವಾಗಿದ್ದರು. ಅವರನ್ನು ಭಯೋತ್ಪಾದಕರು ಕೊಂದಿದ್ದಾರೆ, ಅವರು ಸ್ಥಳದಲ್ಲೇ ನಿಧನರಾದರು ಎಂಬ ಮಾಹಿತಿ ನಮಗೆ ಬಂದಿದೆ ಎಂದು ಹೇಳಿದ್ದಾರೆ.

ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಲವಾರು ರಾಜಕೀಯ ನಾಯಕರು ದಾಳಿಯನ್ನು ಖಂಡಿಸಿದ್ದಾರೆ. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ರಾಜ್ಯದ ಹಲವಾರು ಸ್ಥಳಗಳಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್