ಸಿಎಂ ಸಿದ್ದರಾಮಯ್ಯ online desk
ದೇಶ

ಪಹಲ್ಗಾಮ್‌ ದಾಳಿ: ಮೃತ ಕನ್ನಡಿಗರಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಿಳಿಸಿದ್ದಾರೆ.

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ.

ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕು ಮುನ್ನ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿ ಸಂಪೂರ್ಣ ಯೋಜಿತವಾಗಿದ್ದು, 28 ಜನರನ್ನು ಬಲಿ ಪಡೆದ ಉಗ್ರರ ಹೇಯಕೃತ್ಯವನ್ನು ಖಂಡಿಸುತ್ತೇನೆ ಎಂದು ಸಿಎಂ ಹೇಳಿದ್ದರು.

"ಈ ಘಟನೆಯಲ್ಲಿ ಗುಪ್ತಚರ ವೈಫಲ್ಯ ಕಂಡುಬಂದಿದೆ. ಈ ಹಿಂದೆ ಫುಲ್ವಾಮಾ ದಾಳಿಯಾಗಿತ್ತು ಮತ್ತು ಈಗ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದೆ" ಎಂದು ಅವರು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?