ಪಹಲ್ಗಾಮ್‌ನ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕ ದಾಳಿ 
ದೇಶ

Pahalgam attack: ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ, ಗಂಭೀರ ಗಾಯಾಳುಗಳಿಗೆ ₹2 ಲಕ್ಷ ಜಮ್ಮು-ಕಾಶ್ಮೀರ ಸರ್ಕಾರ ಪರಿಹಾರ

ಪ್ರೀತಿಪಾತ್ರರ ನಷ್ಟವನ್ನು ಎಷ್ಟೇ ಹಣದಿಂದಲೂ ಸರಿದೂಗಿಸಲು ಸಾಧ್ಯವಿಲ್ಲ. ಆದರೆ, ಬೆಂಬಲ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಜಮ್ಮು-ಕಾಶ್ಮೀರ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸುತ್ತದೆ.

ಶ್ರೀನಗರ: ಮಂಗಳವಾರ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಬುಧವಾರ ಘೋಷಿಸಿದೆ.

'ನಿನ್ನೆ ಪಹಲ್ಗಾಮ್‌ನಲ್ಲಿ ನಡೆದ ಹೇಯ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಮುಗ್ಧ ನಾಗರಿಕರ ವಿರುದ್ಧದ ಈ ಅನಾಗರಿಕ ಮತ್ತು ಅರ್ಥಹೀನ ಕ್ರೂರ ಕೃತ್ಯಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ನಾವು ಇದನ್ನು ಸಾಧ್ಯವಾದಷ್ಟು ಪ್ರಬಲವಾಗಿ ಖಂಡಿಸುತ್ತೇವೆ. ಕಳೆದುಕೊಂಡ ಅಮೂಲ್ಯ ಜೀವಗಳಿಗೆ ನಾವು ದುಃಖಿಸುತ್ತೇವೆ' ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರೀತಿಪಾತ್ರರ ನಷ್ಟವನ್ನು ಎಷ್ಟೇ ಹಣದಿಂದಲೂ ಸರಿದೂಗಿಸಲು ಸಾಧ್ಯವಿಲ್ಲ. ಆದರೆ, ಬೆಂಬಲ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಜಮ್ಮು-ಕಾಶ್ಮೀರ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸುತ್ತದೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದರು.

'ಮೃತದೇಹಗಳನ್ನು ಗೌರವಯುತವಾಗಿ ಅವರ ಮನೆಗಳಿಗೆ ಸಾಗಿಸಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸಲಾಗುತ್ತಿದೆ. ದುಃಖಿತ ಕುಟುಂಬಗಳಿಗೆ ನಮ್ಮ ಹೃದಯಗಳು ಮಿಡಿಯುತ್ತವೆ. ನಿಮ್ಮ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ ಮತ್ತು ಈ ಕರಾಳ ಸಮಯದಲ್ಲಿ ನಿಮ್ಮೊಂದಿಗೆ ನಿಲ್ಲುತ್ತೇವೆ' ಎಂದು ಅಬ್ದುಲ್ಲಾ ಹೇಳಿದರು.

ಮಂಗಳವಾರ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿರುವ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 26 ಜನರು ಸಾವಿಗೀಡಾಗಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಯುಎಇ ಮತ್ತು ನೇಪಾಳದ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ.

'ಭಯೋತ್ಪಾದನೆ ನಮ್ಮ ಸಂಕಲ್ಪವನ್ನು ಎಂದಿಗೂ ಮುರಿಯುವುದಿಲ್ಲ. ಈ ಅನಾಗರಿಕತೆಯ ಹಿಂದಿರುವವರಿಗೆ ತಕ್ಕ ಶಾಸ್ತಿ ಮಾಡದೆ, ಸಂತ್ರಸ್ತರಿಗೆ ನ್ಯಾಯ ಕೊಡಿಸದೆ ನಾವು ವಿರಮಿಸುವುದಿಲ್ಲ' ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT