ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ 
ದೇಶ

ಪಹಲ್ಗಾಮ್ ಉಗ್ರರ ದಾಳಿ: ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರೂ ಉಪಸ್ಥಿತರಿರಲಿದ್ದಾರೆ. ಪಹಲ್ಗಾಮ್‌ ದಾಳಿಯ ಕುರಿತು ಸರ್ವಪಕ್ಷ ಸಭೆಗೆ ಮಾಹಿತಿ ನೀಡಲಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷಗಳ ಸಭೆ ಕರೆದಿದೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರೂ ಉಪಸ್ಥಿತರಿರಲಿದ್ದಾರೆ. ಪಹಲ್ಗಾಮ್‌ ದಾಳಿಯ ಕುರಿತು ಸರ್ವಪಕ್ಷ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಇಂದಿನ ಸಭೆಯಲ್ಲಿ ಪಾಕ್‌ ಉಗ್ರರನ್ನು ಮಟ್ಟಹಾಕಲು, ಪಾಕ್‌ ಸಂಬಂಧ ಕಡಿದುಕೊಳ್ಳುವ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ವಿವರಿಸಲಿದ್ದಾರೆ.

ಸಭೆಯಲ್ಲಿ, ರಾಜನಾಥ್ ಸಿಂಗ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಭಯೋತ್ಪಾದಕ ದಾಳಿ, ನಂತರ ಸಂಗ್ರಹಿಸಿದ ಪುರಾವೆಗಳು ಮತ್ತು ಘಟನೆಯ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ನಾಯಕರಿಗೆ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಗ್ರರ ದಾಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯುವುದರ ಜತೆಗೆ ಭಯೋತ್ಪಾದಕರನ್ನು ಹುಡುಕಿ ಹೊಡೆದು ಹಾಕಬೇಕು’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT