ರಾಹುಲ್ ಗಾಂಧಿ  
ದೇಶ

ಪಹಲ್ಗಾಮ್ ಉಗ್ರ ದಾಳಿ: ನಾಳೆ ಕಾಶ್ಮೀರಕ್ಕೆ ರಾಹುಲ್ ಗಾಂಧಿ ಭೇಟಿ

ಭಯೋತ್ಪಾದಕ ದಾಳಿಯ ನಂತರ ರಾಹುಲ್ ಗಾಂಧಿ ತಮ್ಮ ಅಮೆರಿಕ ಭೇಟಿಯನ್ನು ಮೊಟಕುಗೊಳಿಸಿ ಇಂದು ಭಾರತಕ್ಕೆ ವಾಪಸ್ ಆಗಿದ್ದಾರೆ.

ನವದೆಹಲಿ: 26 ಪ್ರವಾಸಿಗರನ್ನು ಬಲಿ ಪಡೆದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ಪ್ರಕಟಿಸಿದೆ.

ಭಯೋತ್ಪಾದಕ ದಾಳಿಯ ನಂತರ ರಾಹುಲ್ ಗಾಂಧಿ ತಮ್ಮ ಅಮೆರಿಕ ಭೇಟಿಯನ್ನು ಮೊಟಕುಗೊಳಿಸಿ ಇಂದು ಭಾರತಕ್ಕೆ ವಾಪಸ್ ಆಗಿದ್ದಾರೆ ಮತ್ತು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲೂ ಭಾಗವಹಿಸಿದ್ದರು.

ನಾಳೆ ಕಾಶ್ಮೀರಕ್ಕೆ ತೆರಳುತ್ತಿರುವ ರಾಹುಲ್ ಗಾಂಧಿ ಅವರು ಜಿಎಂಸಿ ಅನಂತ್‌ನಾಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಇನ್ನು ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಅದಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ