ಸೇನೆಯ ನರ್ಸಿಂಗ್ ಕಾಲೇಜ್ ವೆಬ್ ಸೈಟ್ ಹ್ಯಾಕ್! Army Nursing College Website Hacked
ದೇಶ

Pahalgam Terror Attack ಬೆನ್ನಲ್ಲೇ ಸೇನೆಯ ನರ್ಸಿಂಗ್ ಕಾಲೇಜ್ ವೆಬ್ ಸೈಟ್ ಹ್ಯಾಕ್!

ಪಾಕಿಸ್ತಾನ ಮೂಲದ 'ಟೀಮ್ ಇನ್ಸೇನ್ ಪಿಕೆ' ಎಂಬ ಹ್ಯಾಕರ್ ಗುಂಪು ಭಾರತೀಯ ಸೇನೆಗೆ ಸೇರಿದ ಆರ್ಮಿ ಕಾಲೇಜ್ ಆಫ್ ನರ್ಸಿಂಗ್‌ನ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬೆನ್ನಲ್ಲೇ ಇದೀಗ ಪಾಕಿಸ್ತಾನಿ ಮೂಲದ ಉಗ್ರ ಸಂಘಟನೆಗಳು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಸೈಬರ್ ದಾಳಿ ನಡೆಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕೆಲವೇ ದಿನಗಳ ಅಂತರದಲ್ಲಿ ಪಾಕಿಸ್ತಾನ ಮೂಲದ 'ಟೀಮ್ ಇನ್ಸೇನ್ ಪಿಕೆ' ಎಂಬ ಹ್ಯಾಕರ್ ಗುಂಪು ಭಾರತೀಯ ಸೇನೆಗೆ ಸೇರಿದ ಆರ್ಮಿ ಕಾಲೇಜ್ ಆಫ್ ನರ್ಸಿಂಗ್‌ನ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ ಪಾಕ್ ಮೂಲದ ಹ್ಯಾಕರ್‌ಗಳು ಆರ್ಮಿ ಕಾಲೇಜ್ ಆಫ್ ನರ್ಸಿಂಗ್‌ನ ವೆಬ್‌ಸೈಟ್‌ ಅನ್ನು ಹ್ಯಾಕ್ ಮಾಡಿ, ಅಲ್ಲಿ ಪ್ರಚೋದನಕಾರಿ ಸಂದೇಶವನ್ನು ಬಿಟ್ಟಿದ್ದಾರೆ. ಇತರ ವಿಷಯಗಳ ಜೊತೆಗೆ, ಎರಡು ರಾಷ್ಟ್ರಗಳ ಸಿದ್ಧಾಂತದ ಬಗ್ಗೆ ಮಾತನಾಡಿದ್ದಾರೆ.

ಇನ್ನು ಈ ಆರ್ಮಿ ಕಾಲೇಜ್ ಆಫ್ ನರ್ಸಿಂಗ್, ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯಿಂದ ನಿರ್ವಹಿಸಲ್ಪಡುವ ಸ್ವಾಯತ್ತ ಸಂಸ್ಥೆಯಾಗಿದೆ. ಕಂಪ್ಯೂಟರ್ ಭದ್ರತಾ ಘಟನೆಗಳಿಗೆ ಪ್ರತಿಕ್ರಿಯಿಸುವ ರಾಷ್ಟ್ರೀಯ ನೋಡಲ್ ಏಜೆನ್ಸಿಯಾದ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In)ನ ಸಹಾಯವನ್ನು ಪಡೆಯಬೇಕಾಗುತ್ತದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಭಾರತ-ಪಾಕ್ ಜಟಾಪಟಿ

ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಭುಗಿಲೆದ್ದಿದ್ದು, ಉಭಯ ದೇಶಗಳು ಪರಸ್ಪರ ಕ್ರಮಗಳನ್ನು ಕೈಗೊಂಡಿವೆ. ಪ್ರಮುಖವಾಗಿ ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದು, ದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ ಸಲಹೆಗಾರರನ್ನು "ಪರ್ಸೋನಾ ನಾನ್ ಗ್ರಾಟಾ" ಎಂದು ಘೋಷಿಸಿದೆ.

ಅಲ್ಲದೆ ಅವರನ್ನು ಕೂಡಲೇ ಪಾಕಿಸ್ತಾನಕ್ಕೆ ತೆರಳವುಂತೆ ಸೂಚಿಸಿದೆ. ಇಷ್ಟು ಮಾತ್ರವಲ್ಲದೇ ಪಾಕಿಸ್ತಾನಿ ವೀಸಾಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಭಾರತ ಗುರುವಾರ ಘೋಷಿಸಿತು. ಹಿಂದೂ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ದೀರ್ಘಾವಧಿಯ ವೀಸಾಗಳನ್ನು ಹೊರತುಪಡಿಸಿ ಇತರೆ ಪಾಕಿಸ್ತಾನಿಯರು ದೇಶವನ್ನು ತೊರೆಯಲು 72 ಗಂಟೆಗಳ ಕಾಲಾವಕಾಶ ನೀಡಿದೆ.

ಇದಕ್ಕೆ ಪ್ರತ್ಯುತ್ತರ ನೀಡಿರುವ ಪಾಕಿಸ್ತಾನ ಶಿಮ್ಲಾ ಒಪ್ಪಂದ ಸೇರಿದಂತೆ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ಸ್ಥಗಿತಗೊಳಿಸುವ "ಹಕ್ಕನ್ನು" ಅದು ಚಲಾಯಿಸುತ್ತದೆ ಎಂದು ಘೋಷಣೆ ಮಾಡಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದಾಗಿ ಘೋಷಿಸಿದೆ. ಇಷ್ಟು ಮಾತ್ರವಲ್ಲದೇ ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಿರುವ ಭಾರತ ಸರ್ಕಾರದ ನಿರ್ಣಯವನ್ನು ಪಾಕಿಸ್ತಾನದ ಮೇಲಿನ ಯುದ್ಧ ಎಂದು ಪರಿಗಣಿಸುವುದಾಗಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT