ರಾಹುಲ್ ಗಾಂಧಿ 
ದೇಶ

ಭಯೋತ್ಪಾದನೆ ವಿರುದ್ಧ ಭಾರತ ಒಗ್ಗಟ್ಟಿನಿಂದ ನಿಲ್ಲುವುದು ಮುಖ್ಯ: ಶ್ರೀನಗರದಲ್ಲಿ ರಾಹುಲ್ ಗಾಂಧಿ

ಶುಕ್ರವಾರ ಬೆಳಿಗ್ಗೆ ಶ್ರೀನಗರಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಬಾದಾಮಿಬಾಗ್ ಕಂಟೋನ್ಮೆಂಟ್‌ನಲ್ಲಿರುವ ಸೇನೆಯ 92 ಬೇಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಉದ್ದೇಶ ದೇಶದ ಜನರನ್ನು ವಿಭಜಿಸುವುದಾಗಿತ್ತು ಮತ್ತು ಭಯೋತ್ಪಾದನೆಯನ್ನು ಒಮ್ಮೆಗೇ ಸೋಲಿಸಲು ಭಾರತ ಒಗ್ಗಟ್ಟಿನಿಂದ ನಿಲ್ಲುವುದು ಅತ್ಯಗತ್ಯ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

'ಇದೊಂದು ಭಯಾನಕ ದುರಂತ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮತ್ತು ಸಹಾಯ ಮಾಡಲು ನಾನು ಇಲ್ಲಿಗೆ ಬಂದಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ಇಡೀ ಜನರು ಈ ಭಯಾನಕ ಕೃತ್ಯವನ್ನು ಖಂಡಿಸಿದ್ದಾರೆ. ಅವರು ರಾಷ್ಟ್ರವನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ' ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ ಇಲ್ಲಿಗೆ ಆಗಮಿಸಿದ ರಾಹುಲ್ ಗಾಂಧಿ, ಬಾದಾಮಿಬಾಗ್ ಕಂಟೋನ್ಮೆಂಟ್‌ನಲ್ಲಿರುವ ಸೇನೆಯ 92 ಬೇಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.

'ನಾನು ಗಾಯಾಳುಗಳಲ್ಲಿ ಒಬ್ಬರನ್ನು ಭೇಟಿಯಾದೆ, ಉಳಿದವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಏಕೆಂದರೆ, ಅವರು ಮನೆಗಳಿಗೆ ಹಿಂತಿರುಗಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರೊಂದಿಗೂ ನನ್ನ ಪ್ರೀತಿ ಮತ್ತು ವಾತ್ಸಲ್ಯ ಇರುತ್ತದೆ. ಇಡೀ ರಾಷ್ಟ್ರವು ಒಂದಾಗಿ ನಿಂತಿದೆ ಎಂದು ಎಲ್ಲರೂ ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ' ಎಂದು ಅವರು ಹೇಳಿದರು.

ಗುರುವಾರ ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯನ್ನು ಉಲ್ಲೇಖಿಸಿದ ಗಾಂಧಿ, ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸರ್ಕಾರಕ್ಕೆ ವಿಪಕ್ಷಗಳು ಬೆಂಬಲ ಸೂಚಿಸಿವೆ ಎಂದರು.

'ಈ ಘಟನೆಯ ಹಿಂದಿನ ಉದ್ದೇಶ ಸಮಾಜವನ್ನು ವಿಭಜಿಸುವುದು, ಸಹೋದರ ಸಹೋದರನ ವಿರುದ್ಧ ಹೋರಾಡುವಂತೆ ಮಾಡುವುದಾಗಿದೆ. ಭಯೋತ್ಪಾದಕರ ಈ ಕೃತ್ಯಕ್ಕೆ ಸೋಲುಂಟು ಮಾಡಲು ಪ್ರತಿಯೊಬ್ಬ ಭಾರತೀಯರೂ ಒಗ್ಗಟ್ಟಿನಿಂದ ನಿಲ್ಲುವುದು, ಒಟ್ಟಾಗಿ ನಿಲ್ಲುವುದು ಬಹಳ ಮುಖ್ಯ' ಎಂದು ಗಾಂಧಿ ಹೇಳಿದರು.

ಕಾಂಗ್ರೆಸ್ ನಾಯಕ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿಯಾದರು.

'ನಾನು ಮತ್ತು ನಮ್ಮ ಪಕ್ಷವು ಅವರನ್ನು ಬೆಂಬಲಿಸುತ್ತೇವೆ ಎಂದು ನಾನು ಇಬ್ಬರಿಗೂ ಭರವಸೆ ನೀಡಿದ್ದೇನೆ' ಎಂದು ಅವರು ಹೇಳಿದರು.

ದೇಶದ ಬೇರೆಡೆ ಕಾಶ್ಮೀರಿಗಳ ಮೇಲೆ ನಡೆಯುತ್ತಿರುವ ಕಿರುಕುಳದ ಕುರಿತು ಮಾತನಾಡಿದ ಅವರು, 'ಕೆಲವರು ಕಾಶ್ಮೀರದ ನನ್ನ ಸಹೋದರ ಸಹೋದರಿಯರ ಮೇಲೆ ದಾಳಿ ಮಾಡುತ್ತಿರುವುದು ದುಃಖಕರವಾಗಿದೆ. ನಾವೆಲ್ಲರೂ ಒಟ್ಟಾಗಿ, ಒಗ್ಗಟ್ಟಿನಿಂದ ನಿಂತು ಭಯೋತ್ಪಾದನೆಯನ್ನು ಶಾಶ್ವತವಾಗಿ ಸೋಲಿಸುವುದು ಮತ್ತು ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ ಎಂದು ನಾನು ಭಾವಿಸುತ್ತೇನೆ' ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT