ಫಾರೂಕ್ ಅಹ್ಮದ್ ತಡ್ವಾ ಮನೆ ಧ್ವಂಸ 
ದೇಶ

Pahalgam Terror Attack: ಮತ್ತೋರ್ವ ಉಗ್ರನ ಮನೆ ಧ್ವಂಸ ಮಾಡಿದ Indian Army, Video

ಉಗ್ರರ ನೆಲೆ, ಅಡಗುದಾಣಗಳನ್ನೇ ಹುಡುಕಿ ಹುಡುಕಿ ಛಿದ್ರ ಛಿದ್ರ ಮಾಡಿದೆ. ನಿನ್ನೆ ಮೂವರು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿತ್ತು.

ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಯೋತ್ಪಾದಕರ ಮೇಲೆ ಮುಗಿಬಿದ್ದಿರುವ ಭಾರತೀಯ ಸೇನೆ ಇಂದು ಮತ್ತೋರ್ವ ಉಗ್ರನ ಮನೆ ಧ್ವಂಸಗೊಳಿಸಿದೆ.

ಹೌದು.. 26 ಮಂದಿ ಹಿಂದೂ ಪ್ರವಾಸಿಗರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಉಗ್ರರ ವಿರುದ್ಧ ಸಮರ ಸಾರಿರುವ ಭಾರತೀಯ ಸೇನೆ (Indian Army), ಇದೀಗ ಅವರ ಮನೆಗಳನ್ನು ಧ್ವಂಸ ಮಾಡುತ್ತಿದೆ.

ಉಗ್ರರ ನೆಲೆ, ಅಡಗುದಾಣಗಳನ್ನೇ ಹುಡುಕಿ ಹುಡುಕಿ ಛಿದ್ರ ಛಿದ್ರ ಮಾಡಿದೆ. ನಿನ್ನೆ ಮೂವರು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿತ್ತು. ಇದೀಗ ಅದರ ಮುಂದುವರೆದ ಭಾಗವಾಗಿ ಮತ್ತೋರ್ವ ಉಗ್ರನ ಮನೆಯನ್ನು ಭಾರತೀಯ ಸೇನೆ ಸ್ಫೋಟಿಸಿದೆ.

ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕಲಾರೂಸ್ ಪ್ರದೇಶದಲ್ಲಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಫಾರೂಕ್ ಅಹ್ಮದ್ ತಡ್ವಾ ಎಂಬ ಉಗ್ರನ ಮನೆಯ ಮೇಲೆ ಅಧಿಕಾರಿಗಳು ಬಾಂಬ್ ದಾಳಿ ನಡೆಸಿದ್ದಾರೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಫಾರೂಕ್ ಪ್ರಸ್ತುತ ಪಾಕಿಸ್ತಾನದಲ್ಲಿದ್ದಾನೆ ಮತ್ತು ಕಾಶ್ಮೀರದಲ್ಲಿ ಮುಗ್ಧ ನಾಗರಿಕರನ್ನು ಕೊಲ್ಲಲು ಪಾಕಿಸ್ತಾನ ಸೇನೆಯೊಂದಿಗೆ ಕೆಲಸ ಮಾಡುತ್ತಿದ್ದಾನೆ.

ಶನಿವಾರ, ದಕ್ಷಿಣ ಕಾಶ್ಮೀರದ ಪುಲ್ವಾಮಾ, ಶೋಪಿಯಾನ್, ಕುಪ್ವಾರಾ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ ಭಯೋತ್ಪಾದಕರ ನಾಲ್ಕು ಮನೆಗಳನ್ನು ನೆಲಸಮ ಮಾಡಲಾಗಿದೆ. ಈ ಹಿಂದೆ ಪಹಲ್ಗಾಮ್‌ ದಾಳಿ ನಡೆಸಿದ ಉಗ್ರ ಆಸೀಫ್‌ ಶೇಖ್‌ ಮನೆ ಧ್ವಂಸ ಮಾಡಲಾಗಿತ್ತು.

ಅವನ ಮನೆಯನ್ನು ಏಪ್ರಿಲ್ 24, 2025ರಂದು ಟ್ರಾಲ್‌ನಲ್ಲಿ ಕೆಡವಲಾಯಿತು. ಈ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಬಿಗಿ ಭದ್ರತೆಯಲ್ಲಿ ನಡೆಸಿದವು. ಭಯೋತ್ಪಾದಕರಿಗೆ ಸಹಾಯ ಮಾಡುವವರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್