ಅಪಾರ್ಟ್ ಮೆಂಟಿನಲ್ಲಿ ಬೆಂಕಿ  
ದೇಶ

ಮುಂಬೈ: ಅಂಧೇರಿ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ' ಮಹಿಳೆ ಸಾವು, 6 ಮಂದಿ ಉಸಿರುಗಟ್ಟಿ ಆಸ್ಪತ್ರೆಗೆ ದಾಖಲು

ಲೋಖಂಡ್‌ವಾಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿರುವ ಎಂಟು ಅಂತಸ್ತಿನ ಬ್ರೋಕ್ ಲ್ಯಾಂಡ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ನಸುಕಿನ ಜಾವ 2.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಮುಂಬೈ: ಮುಂಬೈನ ಅಂಧೇರಿಯಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 34 ವರ್ಷದ ಮಹಿಳೆ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಉಸಿರುಗಟ್ಟಿ ತೊಂದರೆ ಅನುಭವಿಸಿದ ಘಟನೆ ನಡೆದಿದೆ.

ಲೋಖಂಡ್‌ವಾಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿರುವ ಎಂಟು ಅಂತಸ್ತಿನ ಬ್ರೋಕ್ ಲ್ಯಾಂಡ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ನಸುಕಿನ ಜಾವ 2.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ನಿವಾಸಿಗಳಲ್ಲಿ ಒಬ್ಬರಾದ ಅಭಿನಾ ಸಂಜನ್‌ವಾಲಾ ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ. ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

10 ದಿನಗಳ ಶಿಶು ಮತ್ತು ಮೂರು ವರ್ಷದ ಮಗು ಸೇರಿದಂತೆ ಇತರ ಬಾಧಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಮಗುವಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಇಬ್ಬರು ಪುರುಷರನ್ನು ಕೂಪರ್ ಮತ್ತು ಟ್ರಾಮಾ ಕೇರ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಮನೆಯ ಎದುರು ಕುಳಿತಿದ್ದ ವೃದ್ಧೆ ಮೇಲೆ ಕೋತಿಗಳ ದಾಳಿ; CCTV Video Viral

'ಒಬ್ಬ ಮನುಷ್ಯನ ಜೀವದ ಬೆಲೆ 2 ಲಕ್ಷ ರೂ. ಅಲ್ಲ': ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಉಮಾ ಭಾರತಿ ಕಿಡಿ

ಬಳ್ಳಾರಿ ಫೈರಿಂಗ್: ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ!

SCROLL FOR NEXT