ಕ್ಷಿಪಣಿ ಪರೀಕ್ಷೆ 
ದೇಶ

Anytime Anywhere: ಶತ್ರು ರಾಷ್ಟ್ರಗಳ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆ ಯಶಸ್ವಿ!

ಭಾರತೀಯ ನೌಕಾಪಡೆಯು ಯಾವುದೇ ಕ್ಷಣ, ಎಲ್ಲಿಯೇ ಆದರೂ ರಾಷ್ಟ್ರದ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ, ಭವಿಷ್ಯಕ್ಕೆ ಸಿದ್ಧವಾಗಿದೆ ಎಂದು ಹೇಳಿದೆ.

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರದಲ್ಲಿ ಶತ್ರು ರಾಷ್ಟ್ರಗಳ ಹಡಗುಗಳನ್ನು ಉಡಾಯಿಸಬಲ್ಲಾ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, ಅದರ ದೀರ್ಘ-ಶ್ರೇಣಿಯ ನಿಖರ ದಾಳಿಯ ಸಾಮರ್ಥ್ಯವನ್ನು ಪ್ರದರ್ಶಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕ್ಷಿಪಣಿ ಪರೀಕ್ಷೆಯ ದೃಶ್ಯಗಳನ್ನು ಹಂಚಿಕೊಂಡಿರುವ ನೌಕಪಡೆ, ದೀರ್ಘ ಶ್ರೇಣಿಯ ನಿಖರ ಆಕ್ರಮಣಕ್ಕಾಗಿ ಬಹು ಹಂತದ ವಿರೋಧಿ ಹಡಗುಗಳನ್ನು ನಾಶಪಡಿಸಬಲ್ಲಾ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ ಎಂದು ತಿಳಿಸಿದೆ.

ಭಾರತೀಯ ನೌಕಾಪಡೆಯು ಯಾವುದೇ ಕ್ಷಣ, ಎಲ್ಲಿಯೇ ಆದರೂ ರಾಷ್ಟ್ರದ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ, ಭವಿಷ್ಯಕ್ಕೆ ಸಿದ್ಧವಾಗಿದೆ ಎಂದು ಹೇಳಿದೆ.

ಯುದ್ಧ ನೌಕೆಗಳ ಸಮೂಹದಿಂದ ಬ್ರಹ್ಮೋಸ್ ವಿರೋಧಿ ಹಡುಗು ಮತ್ತು ಕ್ರೂಸ್ ಕ್ಷಿಪಣಿಗಳನ್ನು ಉಡಾವಣೆ ಮಾಡುವುದನ್ನು ದೃಶ್ಯಗಳು ತೋರಿಸುತ್ತವೆ. ಇದು ನೌಕಾಪಡೆಯ ಕಾರ್ಯಾಚರಣೆಯ ಪ್ರದರ್ಶನವಾಗಿದೆ.

26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಡುವೆ ಈ ಕ್ಷಿಪಣಿ ದಾಳಿ ನಡೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT