ಮದರಸಾಗಳಿಗೆ ಬೀಗ 
ದೇಶ

Uttar Pradesh: ಅಕ್ರಮ ಮದರಸಾಗಳಿಗೆ ಬೀಗ; ಶ್ರಾವಸ್ತಿ ಜಿಲ್ಲಾಡಳಿತ ಮಹತ್ವದ ಕ್ರಮ!

ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪದಲ್ಲಿ 10 ಮಾನ್ಯತೆ ಇಲ್ಲದ ಮದರಸಾಗಳನ್ನು ಜಿಲ್ಲಾಡಳಿತ ಬಂದ್ ಮಾಡಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಲಕ್ನೋ: ದೇಶಾದ್ಯಂತ ಪಹಲ್ಗಾಮ್ ಉಗ್ರ ದಾಳಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪದಲ್ಲಿ 10 ಮದರಸಾಗಳನ್ನು ಬಂದ್ ಮಾಡಲಾಗಿದೆ.

ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ನೇಪಾಳ ಗಡಿ ಸಮೀಪದ 15 ಕಿಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪದಲ್ಲಿ 10 ಮಾನ್ಯತೆ ಇಲ್ಲದ ಮದರಸಾಗಳನ್ನು ಜಿಲ್ಲಾಡಳಿತ ಬಂದ್ ಮಾಡಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಧಿಕಾರಿ ದೇವೇಂದ್ರ ರಾಮ್ ಮಾತನಾಡಿ, ಶ್ರಾವಸ್ತಿಯಲ್ಲಿ ಒಟ್ಟು 297 ಮದರಸಾಗಳಿವೆ. ಅವುಗಳಲ್ಲಿ 192 ಮಾನ್ಯತೆ ಪಡೆದಿಲ್ಲ. ಶನಿವಾರ, ನೇಪಾಳ ಗಡಿಯಿಂದ 15 ಕಿ.ಮೀ ವ್ಯಾಪ್ತಿಯೊಳಗೆ ಭಾರತೀಯ ಭೂಪ್ರದೇಶದಲ್ಲಿರುವ 10 ಮದರಸಾಗಳನ್ನು ಅಕ್ರಮ ಎಂದು ಪತ್ತೆ ಮಾಡಲಾಗಿದ್ದು, ಅವುಗಳನ್ನು ಮುಚ್ಚಲಾಗಿದೆ.

ಇವುಗಳಲ್ಲಿ ಹೆಚ್ಚಿನವು ರಹಸ್ಯವಾಗಿ ಕಾರ್ಯನಿರ್ವಹಿಸುತ್ತಿದ್ದವು, ಕೆಲವು ಬಾಡಿಗೆ ಮನೆಗಳು ಅಥವಾ ಮನೆಗಳಲ್ಲಿ ಮತ್ತು ಕೆಲವು ಅರೆ-ನಿರ್ಮಿತ ಕಟ್ಟಡಗಳಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದವು' ಎಂದು ಹೇಳಿದರು.

ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ದ್ವಿವೇದಿ ಅವರ ಸೂಚನೆಯ ಮೇರೆಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಮತ್ತು ಮಾನ್ಯತೆ ಪಡೆಯದ ಮದರಸಾಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ (ಮಾಹಿತಿ ಇಲಾಖೆಯಿಂದ) ಹೊರಡಿಸಲಾದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ದ್ವಿವೇದಿ ಅವರ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಮತ್ತು ಮಾನ್ಯತೆ ಇಲ್ಲದ ಮದರಸಾಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್