ಶಾರದಾ ಬಾಯಿ 
ದೇಶ

'ಅಲ್ಲಿ ನನಗೆ ಯಾರೂ ಇಲ್ಲ': 35 ವರ್ಷಗಳಿಂದ ಭಾರತದಲ್ಲಿ ವಾಸ, ಪಾಕ್ ಮಹಿಳೆಗೆ ವಾಪಸ್ ಹೋಗಲು ಸೂಚನೆ

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ದೇಶದಲ್ಲಿರುವ ಪಾಕಿಸ್ತಾನ ಪ್ರಜೆಗಳು ಪಾಕಿಸ್ತಾನಕ್ಕೆ ಮರಳುವಂತೆ ಸೂಚಿಸಲಾಗಿದೆ.

ನವದೆಹಲಿ: 35 ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಶಾರದಾ ಬಾಯಿ ಅವರಿಗೆ ತಕ್ಷಣವೇ ಭಾರತ ಬಿಟ್ಟು ಹೋಗುವಂತೆ ಒಡಿಶಾ ಪೊಲೀಸರು ಸೂಚಿಸಿದ್ದಾರೆ. ಶಾರದಾ ಬಾಯಿ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಮತ್ತು ಅವರು ತಡ ಮಾಡದೆಯೇ ಪಾಕಿಸ್ತಾನಕ್ಕೆ ಮರಳಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಒಂದು ವೇಳೆ ಅವರು ಈ ಆದೇಶವನ್ನು ಪಾಲಿಸದಿದ್ದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ದೇಶದಲ್ಲಿರುವ ಪಾಕಿಸ್ತಾನ ಪ್ರಜೆಗಳು ಪಾಕಿಸ್ತಾನಕ್ಕೆ ಮರಳುವಂತೆ ಸೂಚಿಸಲಾಗಿದೆ.

ಹಲವಾರು ವರ್ಷಗಳ ಹಿಂದೆ ಬೋಲಂಗೀರ್‌ನ ಹಿಂದೂ ಕುಟುಂಬದ ಮಹೇಶ್ ಕುಕ್ರೇಜಾ ಎಂಬುವವರನ್ನು ಶಾರದಾ ಬಾಯಿ ವಿವಾಹವಾಗಿದ್ದರು. ದಂಪತಿಗೆ ಮಗ ಮತ್ತು ಮಗಳು ಇದ್ದಾರೆ. ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲ ಪ್ರಮುಖ ದಾಖಲೆಗಳನ್ನು ಹೊಂದಿದ್ದರೂ, ಅವರಿಗೆ ಭಾರತೀಯ ಪೌರತ್ವ ನೀಡಿಲ್ಲ.

ಸರ್ಕಾರ ತನ್ನನ್ನು ತನ್ನ ಕುಟುಂಬದಿಂದ ಬೇರ್ಪಡಿಸಬಾರದು. ಮೂರು ದಶಕಗಳಿಗೂ ಹೆಚ್ಚು ಕಾಲ ತಾನು ಭಾರತದಲ್ಲೇ ವಾಸಿಸುತ್ತಿದ್ದು, ಈಗಲೂ ಇಲ್ಲೇ ವಾಸಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

'ನಾನು ಮೊದಲು ಕೊರಾಪುಟ್‌ನಲ್ಲಿದ್ದೆ, ನಂತರ ಬೋಲಂಗೀರ್‌ಗೆ ಬಂದೆ. ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ... ನನ್ನ ಪಾಸ್‌ಪೋರ್ಟ್ ಕೂಡ ತುಂಬಾ ಹಳೆಯದಾಗಿದೆ. ದಯವಿಟ್ಟು ನನಗೆ ಇಲ್ಲಿ ವಾಸಿಸಲು ಅವಕಾಶ ನೀಡಿ ಎಂದು ಸರ್ಕಾರ ಮತ್ತು ನಿಮ್ಮೆಲ್ಲರನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನನಗೆ ಇಬ್ಬರು ಮಕ್ಕಳು, ಮೊಮ್ಮಕ್ಕಳು ಇದ್ದಾರೆ... ನಾನು ಇಲ್ಲಿ ಭಾರತೀಯಳಾಗಿ ವಾಸಿಸಲು ಬಯಸುತ್ತೇನೆ' ಎಂದಿದ್ದಾರೆ.

ಈ ಸಂಬಂಧ ಅವರು ಈಗಾಗಲೇ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಬೋಲಂಗೀರ್ ಪೊಲೀಸರು ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಬುಧವಾರ ಘೋಷಿಸಲಾದ ಭಾರತದ ಮಿಲಿಟರಿಯೇತರ ಕ್ರಮಗಳಲ್ಲಿ ಸಿಂಧೂ ನದಿ ನೀರು ಒಪ್ಪಂದವನ್ನು ತಕ್ಷಣ ಮತ್ತು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸುವುದು, ಅಟ್ಟಾರಿ ಗಡಿಯನ್ನು ಮುಚ್ಚುವುದು ಮತ್ತು ಸದ್ಯ ಭಾರತದಲ್ಲಿರುವ ಎಲ್ಲ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸುವುದು ಸೇರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT