ರಾಷ್ಟ್ರೀಯ ತನಿಖಾ ಸಂಸ್ಥೆ 
ದೇಶ

Pahalgam attack: ಕಣಿವೆಯಲ್ಲಿನ ಡಜನ್‌ಗೂ ಹೆಚ್ಚು ಸಕ್ರಿಯ ಉಗ್ರರ ಕೈವಾಡ ಪತ್ತೆ; ಮೂವರ ತಲೆಗೆ 20 ಲಕ್ಷ ರೂ ಬಹುಮಾನ ಘೋಷಣೆ

ಅವರಲ್ಲಿ ಎಂಟು ಮಂದಿ ಲಷ್ಕರ್-ಎ-ತೋಯ್ಬಾ( LET) ಮತ್ತು ತಲಾ ಮೂವರು ಜೈಶ್-ಎ-ಮೊಹಮ್ಮದ್ (JEM) ಮತ್ತು ಹಿಜ್ಬುಲ್ ಮುಜಾಹಿದೀನ್ (HM)ಸಂಘಟನೆಗೆ ಸೇರಿದವರಾಗಿದ್ದಾರೆ

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ತನಿಖೆಯನ್ನು ಮುಂದುವರೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಣಿವೆಯಲ್ಲಿನ ಡಜನ್‌ಗೂ ಹೆಚ್ಚು ಉಗ್ರರನ್ನು ಗುರುತಿಸಿದೆ. ಅವರಲ್ಲಿ ಎಂಟು ಮಂದಿ ಲಷ್ಕರ್-ಎ-ತೋಯ್ಬಾ( LET) ಮತ್ತು ತಲಾ ಮೂವರು ಜೈಶ್-ಎ-ಮೊಹಮ್ಮದ್ (JEM) ಮತ್ತು ಹಿಜ್ಬುಲ್ ಮುಜಾಹಿದೀನ್ (HM)ಸಂಘಟನೆಗೆ ಸೇರಿದವರಾಗಿದ್ದಾರೆ. ಅವರು ದಾಳಿ ನಡೆಸಲು ಭಯೋತ್ಪಾದಕರಿಗೆ ನೆರವಾಗಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾಶ್ಮೀರ ಕಣಿವೆಯಲ್ಲಿ ಸುಮಾರು 60 ಉಗ್ರರು ಸಕ್ರಿಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಅವರಲ್ಲಿ ಹನ್ನೆರಡು ಮಂದಿಯನ್ನು NIA ಗುರುತಿಸಿದ್ದು, ಪಹಲ್ಗಾಮ್ ಉಗ್ರರ ದಾಳಿ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಂತೆ ಏಜೆನ್ಸಿ ಇದೀಗ ಅವರ ಮೇಲೆ ಕಣ್ಣಿಟ್ಟಿದೆ. ಪಹಲ್ಗಾಮ್ ದಾಳಿಯಲ್ಲಿನ ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಿದ ನಂತರ ಗುಪ್ತಚರ ಬ್ಯೂರೋ ಹಂಚಿಕೊಂಡ ಪಟ್ಟಿಯಿಂದ NIA ಅವರನ್ನು ಗುರುತಿಸಿದೆ.

NIA ಶಂಕಿತ ಉಗ್ರರ ಪಟ್ಟಿಯಲ್ಲಿರುವ 14 ಸಕ್ರಿಯ ಭಯೋತ್ಪಾದಕರಲ್ಲಿ ಹೆಚ್ಚಿನವರು 20ರ ವಯಸ್ಸಿನವರಾಗಿದ್ದು, 2022ರ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ. ಶೋಪಿಯಾನ್‌ನಲ್ಲಿ ಐವರು, ಪುಲ್ವಾಮಾದಲ್ಲಿ ನಾಲ್ವರು, ಅನಂತನಾಗ್‌ನಲ್ಲಿ ಇಬ್ಬರು ಮತ್ತು ಸೋಪೋರ್, ಅವಂತಿಪೋರಾ ಮತ್ತು ಕುಲ್ಗಾಮ್‌ನಲ್ಲಿ ತಲಾ ಒಬ್ಬರು ಸಕ್ರಿಯರಾಗಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, LET ಉಗ್ರ ಸಂಘಟನೆಯ ಅಹ್ಸಾನ್ ಶೇಖ್ ಇತರ ನಾಲ್ವರೊಂದಿಗೆ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕೆ ಇದೆ. ಆತನ ಮನೆಯನ್ನು ಈಗಾಗಲೇ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ. ಎಲ್‌ಇಟಿಯೊಂದಿಗೆ ಸಂಬಂಧ ಹೊಂದಿರುವ ಮತ್ತೊಬ್ಬ ಶಂಕಿತ ಶಾಹಿದ್ ಕುಟೇ ಅವರ ಮನೆಯನ್ನೂ ಧ್ವಂಸಗೊಳಿಸಲಾಗಿದೆ.

ಪಹಲ್ಗಾಮ್ ದಾಳಿಯಲ್ಲಿ ಇನ್ನೊಬ್ಬ ಭಯೋತ್ಪಾದಕ JEM ಸಂಘಟನೆಯ ಆಸಿಫ್ ಶೇಖ್ ಹೆಸರು ಕೂಡ ಕಾಣಿಸಿಕೊಂಡಿದೆ. ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ISI ನಿರ್ದೇಶನದ ಮೇರೆಗೆ ಪಹಲ್ಗಾಮ್ ಹತ್ಯೆಯಲ್ಲಿ LET ಗೆ ಜೆಇಎಂ ನೆರವಾಗಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಟ್ರಾಲ್‌ನಲ್ಲಿರುವ ಶೇಖ್ ಅವರ ನಿವಾಸವನ್ನು ಭದ್ರತಾ ಪಡೆಗಳು ನೆಲಸಮಗೊಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈಗಾಗಲೇ ಇಬ್ಬರು ಪಾಕಿಸ್ತಾನಿಗಳಾದ ಅಲಿ ಭಾಯಿ ಅಲಿಯಾಸ್ ತಲ್ಹಾ ಭಾಯಿ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮತ್ತು ಸ್ಥಳೀಯ ಉಗ್ರ ಆದಿಲ್ ಹುಸೇನ್ ಥೋಕರ್ ಸೇರಿದಂತೆ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ತಲೆಗೆ ತಲಾ 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT