ಸಂಗ್ರಹ ಚಿತ್ರ 
ದೇಶ

ಪಹಲ್ಗಾಮ್ ಉಗ್ರರ ದಾಳಿ ಕುರಿತು ಕಪೋಲಕಲ್ಪಿತ ಸುದ್ದಿ ಪ್ರಕಟ: ಉಗ್ರರನ್ನು ಬಂಡುಕೋರರು ಎಂದ BBC; ಕೇಂದ್ರ ಸರ್ಕಾರ ಕಠಿಣ ಎಚ್ಚರಿಕೆ

ಪಹಲ್ಗಾಮ್ ಉಗ್ರರ ದಾಳಿ ಘಟನೆ ಬಳಿಕ ಪಾಕಿಸ್ತಾನ ಭಾರತೀಯರಿಗೆ ವೀಸಾಗಳನ್ನು ಸ್ಥಗಿತಗೊಳಿಸಿದೆ ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟಿಸಿರುವ ಬಿಬಿಸಿ, ಉಗ್ರರ ದಾಳಿಯನ್ನು ಬಂಡುಕೋರರ ದಾಳಿ ಎಂದು ಉಲ್ಲೇಖಿಸಿದೆ.

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಕುರಿತು ಕಪೋಲಕಲ್ಪಿತ ಸುದ್ದಿ ಪ್ರಕಟಿಸಿದ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ವಿರುದ್ಧ ಕೇಂದ್ರ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪಹಲ್ಗಾಮ್ ಉಗ್ರರ ದಾಳಿ ಘಟನೆ ಬಳಿಕ ಪಾಕಿಸ್ತಾನ ಭಾರತೀಯರಿಗೆ ವೀಸಾಗಳನ್ನು ಸ್ಥಗಿತಗೊಳಿಸಿದೆ ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟಿಸಿರುವ ಬಿಬಿಸಿ, ಉಗ್ರರ ದಾಳಿಯನ್ನು ಬಂಡುಕೋರರ ದಾಳಿ ಎಂದು ಉಲ್ಲೇಖಿಸಿದೆ. ಇದಕ್ಕೆ ಕೇಂದ್ರ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಬಿಸಿ ಭಾರತದ ಮುಖ್ಯಸ್ಥ ಜಾಕಿ ಮಾರ್ಟಿನ್ ಅವರಿಗೆ ಪತ್ರ ಬರೆದಿದೆ ಎಚ್ಚರಿಕೆ ನೀಡಿದೆ. ಅಲ್ಲದೆ, ಸ್ಪಷ್ಟನೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಬಿಬಿಸಿಗೆ ಬರೆದ ಔಪಚಾರಿಕ ಪತ್ರದಲ್ಲಿ, ವಿದೇಶಾಂಗ ಸಚಿವಾಲಯವು ಬಿಬಿಸಿಯ ವರದಿಯನ್ನು ಮೇಲ್ವಿಚಾರಣೆ ಮಾಡಲಿದೆ ಎಂದು ತಿಳಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿದಂತೆ 26 ಜನರು ಸಾವನ್ನಪ್ಪಿದ ವರದಿಯನ್ನು ಲಘುವಾಗಿ ಪರಿಗಣಿಸಿದ್ದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯನ್ನು ಅಮೆರಿಕಾ ಸರ್ಕಾರ ತರಾಟೆಗೆ ತೆಗೆದುಕೊಂಡಿತ್ತು.

ಪಹಲ್ಗಾಮ್ ಉಗ್ರರ ದಾಳಿ ಕುರಿತು ವರದಿ ಮಾಡಿದ್ದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ, ಭಯೋತ್ಪಾದಕರು ಎಂಬ ಪದದ ಬದಲು ಬಂದೂಕುಧಾರಿಗಳು ಎಂಬ ಪದಗಳನ್ನು ಬಳಸಿತ್ತು. ಈ ಮೂಲಕ ಘಟನೆಯ ಗಂಭೀರತೆಯನ್ನು ಕಡಿಮೆ ಮಾಡಿತ್ತು.

ಈ ಕುರಿತು ಅಮೆರಿಕಾದ House Foreign Affairs Committee Majority ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, Militants ಇರುವ ಜಾಗದಲ್ಲಿ ʼTerroristʼ ಎಂದು ಹಾಕಿ ಪೋಸ್ಟ್‌ ಮಾಡಿದೆ. ಈ ಮೂಲಕ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ಪದಗಳ ಆಯ್ಕೆಯನ್ನು ತೀವ್ರವಾಗಿ ಖಂಡಿಸಿತ್ತು.

ನ್ಯೂಯಾರ್ಕ್‌ ಟೈಮ್ಸ್‌ ವರದಿಯನ್ನು ಸರಿ ಮಾಡಿದ್ದೇವೆ. ಇದು ಭಯೋತ್ಪಾದಕ ದಾಳಿ. ಭಾರತವಾಗಲಿ ಅಥವಾ ಇಸ್ರೇಲ್ ಆಗಿರಲಿ, ಭಯೋತ್ಪಾದನೆಯ ವಿಷಯಕ್ಕೆ ಬಂದಾಗ ನ್ಯೂಯಾರ್ಕ್ ಟೈಮ್ಸ್ ಅನ್ನು ವಾಸ್ತವದಿಂದ ದೂರವಿಡಲಾಗುತ್ತದೆ ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT