ಸುಪ್ರೀಂಕೋರ್ಟ್ 
ದೇಶ

OTT, ಸೋಶಿಯಲ್ ಮೀಡಿಯಾದಲ್ಲಿ Sex ಕಂಟೆಂಟ್ ಸ್ಟ್ರೀಮಿಂಗ್; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

ಇದು ನಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ. ನಾವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಅತಿ ಕ್ರಮಿಸುತ್ತಿದ್ದೇವೆ ಎಂಬ ಆರೋಪವಿದೆ ಎಂದು ನ್ಯಾಯಮೂರ್ತಿ ಗವಾಯಿ ಅವರು ನ್ಯಾಯಾಂಗದ ಮೇಲಿನ ಇತ್ತೀಚಿನ ದಾಳಿಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ನವದೆಹಲಿ: OTT ಮತ್ತು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ Sex ಕಂಟೆಂಟ್ ಸ್ಟ್ರೀಮಿಂಗ್ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದ್ದು, ಕೇಂದ್ರ ಸರ್ಕಾರ ಮತ್ತಿತರರಿಂದ ಪ್ರತಿಕ್ರಿಯೆಯನ್ನು ಕೋರಿದೆ.

ಈ ಸಮಸ್ಯೆಯನ್ನು ಬಗೆಹರಿಸಲು ಶಾಸಕಾಂಗ ಅಥವಾ ಕಾರ್ಯಾಂಗ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ನ್ಯಾಯ ಪೀಠ ಹೇಳಿದೆ.

ಇದು ನಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ. ನಾವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಅತಿ ಕ್ರಮಿಸುತ್ತಿದ್ದೇವೆ ಎಂಬ ಆರೋಪವಿದೆ ಎಂದು ನ್ಯಾಯಮೂರ್ತಿ ಗವಾಯಿ ಅವರು ನ್ಯಾಯಾಂಗದ ಮೇಲಿನ ಇತ್ತೀಚಿನ ದಾಳಿಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರ ಇದನ್ನು ವಿರೋಧಿ ದಾವೆ ಎಂದು ಪರಿಗಣಿಸುವುದಿಲ್ಲ. ದಯವಿಟ್ಟು ಇಲ್ಲಿ ನಿಗಾ ವಹಿಸಿ. ಸಂವಿಧಾನದ 19 (2)ನೇ ವಿಧಿಯನ್ನು ಗಮನದಲ್ಲಿಟ್ಟುಕೊಂಡು ಅಭಿವ್ಯಕ್ತಿ ಸ್ವಾತಂತ್ರ್ಯ ಸಮತೋಲನದೊಂದಿಗೆ ಬರುತ್ತೇವೆ. ಕೆಲವು ವಿಷಯಗಳು ಅಶ್ಲೀಲ ಮಾತ್ರವಲ್ಲದೆ "ವಿಕೃತ"ವಾಗಿವೆ. ಈ ನಿಟ್ಟಿನಲ್ಲಿ ಕೆಲವು ನಿಯಮಗಳಿದ್ದರೂ ಇನ್ನೂ ಕೆಲವು ಚಿಂತನೆಯಲ್ಲಿವೆ ಎಂದು ಹೇಳಿದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವಿಷ್ಣು ಶಂಕರ್ ಜೈನ್, ಇದು ಪ್ರತಿಕೂಲವಾದ ದಾವೆಯಲ್ಲ. OTT ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ವಿಷಯಗಳ ಬಗ್ಗೆ ಗಂಭೀರ ಕಳವಳವನ್ನು ವ್ಯಕ್ತಪಡಿಸಿದೆ. ಅಂತಹ ವಿಷಯವನ್ನು ಯಾವುದೇ ನಿರ್ಬಂಧಗಳಿಲ್ಲದೆ ಪ್ರದರ್ಶಿಸಲಾಗಿದೆ ಎಂದು ಹೇಳಿದರು.

"ಮಿಸ್ಟರ್ ಸಾಲಿಸಿಟರ್ ನೀವು ಏನಾದರೂ ಮಾಡಬೇಕು ಎಂದು ಮೆಹ್ತಾ ಅವರಿಗೆ ನ್ಯಾಯಮೂರ್ತಿ ಗವಾಯಿ ತಾಕೀತು ಮಾಡಿದರು. ಇಂದಿನ ದಿನಗಳಲ್ಲಿ ಮಕ್ಕಳು ಇದಕ್ಕೆ ಹೆಚ್ಚು ಒಡ್ಡಿಕೊಳ್ಳುತ್ತಿದ್ದಾರೆ. ನಿಯಮಿತ ಕಾರ್ಯಕ್ರಮಗಳ ಭಾಷೆಗಳು, ಕಂಟೆಂಟ್ ಗಳಲ್ಲಿ ಇದು ಹಾಸುಹೊಕ್ಕಾಗಿದೆ. ಇಬ್ಬರು ಗೌರವಯುತ ವ್ಯಕ್ತಿಗಳು ಒಟ್ಟಿಗೆ ಕುಳಿತು ವೀಕ್ಷಿಸಲು ಸಾಧ್ಯವಾಗದಷ್ಟು ಕೆಟ್ಟದಾಗಿವೆ. ಅವುಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಮೆಹ್ತಾ ಹೇಳಿದರು. ಆಗ ನ್ಯಾಯಪೀಠ ಈ ವಿಷಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತಿತರರಿಗೆ ನೋಟಿಸ್ ಜಾರಿ ಮಾಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT