ನೇಹಾ 
ದೇಶ

ಪಹಲ್ಗಾಮ್ ದಾಳಿ ಕುರಿತು ವಿವಾದಾತ್ಮಕ ಪೋಸ್ಟ್‌: ಜಾನಪದ ಗಾಯಕಿ ನೇಹಾ ವಿರುದ್ಧ ದೇಶದ್ರೋಹದ ಕೇಸ್ ದಾಖಲು

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರನ್ನು ಹತ್ಯೆ ಮಾಡಲಾಗಿತ್ತು.

ಲಖನೌ: ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಆಧಾರದ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರನ್ನು ಹತ್ಯೆ ಮಾಡಲಾಗಿತ್ತು. ಪ್ರವಾಸಿಗರ ಧರ್ಮವನ್ನು ಕೇಳಿ ಹತ್ಯೆ ಮಾಡಲಾಗಿದ್ದು, ಇದು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

"ಇಂತಹ ಪರಿಸ್ಥಿತಿಯಲ್ಲಿ, ಗಾಯಕಿ ಮತ್ತು ಕವಯಿತ್ರಿ ನೇಹಾ ಸಿಂಗ್ ರಾಥೋಡ್ ಅವರು ತಮ್ಮ ಟ್ವಿಟರ್(ಈಗ X) ಹ್ಯಾಂಡಲ್ @nehafolksinger ಬಳಸಿಕೊಂಡು ರಾಷ್ಟ್ರೀಯ ಸಮಗ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕೆಲವು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿದ್ದಾರೆ ಮತ್ತು ಧರ್ಮದ ಆಧಾರದ ಮೇಲೆ ಒಂದು ಸಮುದಾಯವನ್ನು ಮತ್ತೊಂದು ಸಮುದಾಯವನ್ನು ಪ್ರಚೋದಿಸಲು ಪದೇ ಪದೇ ಯತ್ನಿಸಿದ್ದಾರೆ" ಎಂದು ದೂರುದಾರ ಅಭಯ್ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಜಾನಪದ ಗಾಯಕಿಯ ವಿರುದ್ಧ ಹಲವಾರು ಆರೋಪಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ಮಥೀಯ ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸುವುದು, ಸಾರ್ವಜನಿಕ ಶಾಂತಿಗೆ ಭಂಗ ತರುವುದು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವುದು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನೇಹಾ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT