ಕಾಶ್ಮೀರ 
ದೇಶ

Pahalgam Attack: ಉಗ್ರರ ಸ್ಲೀಪರ್ ಸೆಲ್ ಮತ್ತೆ ಆ್ಯಕ್ಟಿವ್; ಮತ್ತಷ್ಟು ದಾಳಿ ಸಾಧ್ಯತೆ, ಕಾಶ್ಮೀರದ 48 ಪ್ರವಾಸಿ ತಾಣಗಳು ಬಂದ್!

ಪಹಲ್ಗಾಮ್‌ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಉಗ್ರರ ಸ್ಲೀಪರ್‌ ಸೆಲ್‌ ಸಕ್ರಿಯವಾಗಿದ್ದು, ಮತ್ತಷ್ಟು ದಾಳಿಗೆ ಸಂಚು ರೂಪಿಸಿವೆ.

ಶ್ರೀನಗರ: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಬೆನ್ನಲ್ಲೇ ಉಗ್ರರಿಗಾಗಿ ಭಾರತೀಯ ಸೇನಾಪಡೆ ತೀವ್ರ ಶೋಧ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಮತ್ತಷ್ಟು ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ದಳಗಳು ಎಚ್ಚರಿಕೆ ನೀಡಿವೆ.

ಗುಪ್ತಚರ ದಳಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪಹಲ್ಗಾಮ್‌ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಉಗ್ರರ ಸ್ಲೀಪರ್‌ ಸೆಲ್‌ ಸಕ್ರಿಯವಾಗಿದ್ದು, ಮತ್ತಷ್ಟು ದಾಳಿಗೆ ಸಂಚು ರೂಪಿಸಿವೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸುವಂತೆ ಗುಪ್ತಚರ ದಳಗಳು ಮಾಹಿತಿ ನೀಡಿವೆ ಎಂದು ವರದಿಗಳು ತಿಳಿಸಿವೆ.

ಮೂಲಗಳ ಪ್ರಕಾರ, ಭಯೋತ್ಪಾದಕ ಸಂಘಟನೆಗಳು ಮುಂಬರುವ ದಿನಗಳಲ್ಲಿ ಭದ್ರತಾ ಪಡೆ ಮತ್ತು ಸ್ಥಳೀಯರಲ್ಲದ ನಿವಾಸಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ತಿಳಿದುಬಂದಿದೆ.

ಸ್ಥಳೀಯೇತರ ಜನರು, ಸಿಐಡಿ ಅಧಿಕಾರಿಗಳು, ಕಾಶ್ಮೀರಿ ಪಂಡಿತರು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಐಎಸ್‌ ಐ ಸಂಚು ರೂಪಿಸಿರುವುದಾಗಿ ಗುಪ್ತಚರ ದಳ ಮುನ್ನೆಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್