ಮೂವರು ದಾಳಿಕೋರರನ್ನು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಪಾಕಿಸ್ತಾನಿ ಉಗ್ರರು ಮತ್ತು ಜಮ್ಮು-ಕಾಶ್ಮೀರದ ಅನಂತ್‌ನಾಗ್ ನಿವಾಸಿ ಅಬಿದ್ ಹುಸೇನ್ ಥೋಕರ್ 
ದೇಶ

ಪಹಲ್ಗಾಮ್ ದಾಳಿ: ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ ಮಾಜಿ ಸೈನಿಕ ಹಾಶಿಮ್ ಮೂಸಾ ಪ್ರಮುಖ ಶಂಕಿತ

ಪಾಕಿಸ್ತಾನ ಸೇನೆಯು ಮೂಸಾನನ್ನು ತನ್ನ ಶ್ರೇಣಿಯಿಂದ ವಜಾಗೊಳಿಸಿದ ನಂತರ ಅವನು ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT) ಗೆ ಸೇರಿದನು.

ನವದೆಹಲಿ: ಕಳೆದ ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಗುರುತಿಸಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಒಬ್ಬನಾದ ಹಾಶಿಮ್ ಮೂಸಾ, ಪಾಕಿಸ್ತಾನ ಸೇನೆಯ ಪ್ಯಾರಾ ಫೋರ್ಸಸ್‌ನ ಮಾಜಿ ನಿಯಮಿತ ಅಧಿಕಾರಿ ಎಂದು ಮೂಲಗಳಿಂದ ತಿಳಿದುಬಂದಿದೆ.

ಪಾಕಿಸ್ತಾನ ಸೇನೆಯು ಮೂಸಾನನ್ನು ತನ್ನ ಶ್ರೇಣಿಯಿಂದ ವಜಾಗೊಳಿಸಿದ ನಂತರ ಅವನು ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT) ಗೆ ಸೇರಿದನು. 2023ರ ಸೆಪ್ಟೆಂಬರ್ ತಿಂಗಳಲ್ಲಿ ಭಾರತಕ್ಕೆ ನುಸುಳಿ ಬಂದನು ಎಂದು ನಂಬಲಾಗಿದೆ, ಅವನ ಕಾರ್ಯಾಚರಣೆಯ ಪ್ರದೇಶವು ಮುಖ್ಯವಾಗಿ ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ, ಶ್ರೀನಗರ ಬಳಿ ಇರುತ್ತದೆ.

ಮೂಸಾನನ್ನು ಎಲ್‌ಇಟಿಗೆ ಸೇರಲು ಮತ್ತು ಭಯೋತ್ಪಾದಕ ಸಂಘಟನೆಯ ಕಾಶ್ಮೀರ ಕಾರ್ಯಾಚರಣೆಗಳನ್ನು ಬಲಪಡಿಸಲು ಸಂಘಟನೆ ಮುಖ್ಯಸ್ಥರು ಕೇಳಿರಬಹುದು. ತರಬೇತಿ ಪಡೆದ ಪ್ಯಾರಾ ಕಮಾಂಡೋ ಮೂಸಾ ಅಸಾಂಪ್ರದಾಯಿಕ ಯುದ್ಧ ಮತ್ತು ರಹಸ್ಯ ಕಾರ್ಯಾಚರಣೆಗಳಲ್ಲಿ ಪರಿಣಿತ ಹೊಂದಿದ್ದಾನೆ ಎಂದು ನಂಬಲಾಗಿದೆ. ಅಂತಹ ತರಬೇತಿ ಪಡೆದ ಕಮಾಂಡೋಗಳು ಸಾಮಾನ್ಯವಾಗಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನಿರ್ವಹಿಸುವಲ್ಲಿ ಪರಿಣತರಾಗಿದ್ದು, ಹೆಚ್ಚಿನ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಶಂಕಿತರೆಂದು ತನಿಖಾಧಿಕಾರಿಗಳು ವಿಚಾರಣೆ ನಡೆಸಿದ 14 ಕಾಶ್ಮೀರಿ ಓವರ್ ಗ್ರೌಂಡ್ ವರ್ಕರ್‌ಗಳಲ್ಲಿ (OGW) ಒಬ್ಬನಾದ ಮೂಸಾನ ಎಸ್ ಎಸ್ ಜಿ ಹಿನ್ನೆಲೆಯನ್ನು ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಣಿವೆಯಲ್ಲಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐ ಪಾತ್ರವು ಈಗ ಸ್ಪಷ್ಟವಾಗಿದೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ತಿಳಿಸಿವೆ, ಈ ದಾಳಿಯಲ್ಲಿ 6 ಸ್ಥಳೀಯೇತರರು, ಒಬ್ಬ ವೈದ್ಯರು, ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಮತ್ತು ಇಬ್ಬರು ಸೇನಾ ಪೋರ್ಟರ್‌ಗಳು ಮೃತಪಟ್ಟಿದ್ದು, ಕಳೆದ ವರ್ಷ ನಡೆದ ದಾಳಿಗಳಲ್ಲಿ ಮೂಸಾ ಕೂಡ ಭಾಗಿಯಾಗಿದ್ದಾನೆ.

ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರಾದ ಮೂಸಾ ಮತ್ತು ಅಲಿ ಭಾಯ್ ಮತ್ತು ಇಬ್ಬರು ಸ್ಥಳೀಯರಾದ ಆದಿಲ್ ಥೋಕರ್ ಮತ್ತು ಆಸಿಫ್ ಶೇಖ್ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಈಗ ದೃಢಪಟ್ಟಿದ್ದರೂ, ಒಜಿಡಬ್ಲ್ಯೂಗಳ ವಿಚಾರಣೆಯು ಹೆಚ್ಚಿನ ಪಾಕಿಸ್ತಾನಿ ಭಯೋತ್ಪಾದಕರ ಭಾಗಿಯಾಗಿರುವ ಬಗ್ಗೆ ಸುಳಿವು ನೀಡುತ್ತದೆ.

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ಬಳಿಯ ಜನಪ್ರಿಯ ಹುಲ್ಲುಗಾವಲಿನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ ಕನಿಷ್ಠ 26 ಜನರು ಮೃತಪಟ್ಟಿದ್ದು ಅವರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. 2019 ರ ಪುಲ್ವಾಮಾ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ಘಟನೆ ಇದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT