ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ 
ದೇಶ

Pahalgam Terror Attack: 'ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ'; ಪ್ರಧಾನಿ ಮೋದಿ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಸೇನೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದರು.

ನವದೆಹಲಿ: ಯಾವುದೇ ಕ್ಷಣದಲ್ಲಿ ಯಾವುದೇ ರೀತಿಯ ಪ್ರತಿಕ್ರಿಯೆ ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 22ರಂದು ನಡೆದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯ (Pahalgam Terror Attack) ಬೆನ್ನಲ್ಲೇ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಭದ್ರತಾ ಸಭೆಗಳನ್ನು ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರು ಸೇನೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದರು. ಪಾಕ್​ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದ ಬಳಿಕ ಮುಂದಿನ ಕಾರ್ಯತಂತ್ರಕ್ಕಾಗಿ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಮೂರು ಸೇವೆಗಳ ಮುಖ್ಯಸ್ಥರು ಭಾಗವಹಿಸಿದ್ದು, ಉನ್ನತ ಮಟ್ಟದ ಸಭೆಯಲ್ಲಿ, ಭಯೋತ್ಪಾದನೆಗೆ ಹೀನಾಯ ಹೊಡೆತ ನೀಡುವುದು ರಾಷ್ಟ್ರೀಯ ಸಂಕಲ್ಪ ಎಂದು ಮೋದಿ ದೃಢಪಡಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

'ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ "ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ" ಇದೆ' ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉನ್ನತ ರಕ್ಷಣಾ ಸಂಸ್ಥೆಯ ಅಧ್ಯಕ್ಷತೆಯಲ್ಲಿ ಪ್ರತಿಪಾದಿಸಿದರು. ಅಂತೆಯೇ ಸಶಸ್ತ್ರ ಪಡೆಗಳ ವೃತ್ತಿಪರ ಸಾಮರ್ಥ್ಯಗಳಲ್ಲಿ ಮೋದಿ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

ದಾಳಿಯ ಹಿಂದಿನ ಭಯೋತ್ಪಾದಕರನ್ನು ಮತ್ತು ಅವರ ಸಂಚುಕೋರರನ್ನು ಸೆದೆಬಡಿಯಲು ಭೂಮಿಯ ಯಾವುದೇ ಭಾಗದಲ್ಲೂ ಹಿಂಬಾಲಿಸುವುದಾಗಿ ಪ್ರಧಾನಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ. ಇದು ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಪ್ರಾಯೋಜಿಸುವ ಇತಿಹಾಸ ಹೊಂದಿರುವ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವಾಗಿದೆ. ಪಾಕಿಸ್ತಾನಕ್ಕೆ "ಅವರ ಕಲ್ಪನೆಗೂ ಮೀರಿದ" ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ.

ಇದಕ್ಕೂ ಮುನ್ನ, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮೂರೂ ಅರೆಸೈನಿಕ ಪಡೆಗಳ ಮುಖ್ಯಸ್ಥರು ಮತ್ತು ಇತರ ಎರಡು ಭದ್ರತಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ 22 ರ ಪಹಲ್ಗಾಮ್ ದಾಳಿಯ ನಂತರ, ಭದ್ರತಾ ಕುರಿತಾದ ಕ್ಯಾಬಿನೆಟ್ ಸಮಿತಿಯು 1960 ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿತು, ಪಾಕಿಸ್ತಾನ ತನ್ನ ಷರತ್ತುಗಳನ್ನು ಉಲ್ಲಂಘಿಸಿದೆ ಎಂದು ಅದು ಹೇಳಿದೆ. ಮಾತ್ರವಲ್ಲದೇ ದೀರ್ಘಾವಧಿಯ ವೀಸಾ ಮತ್ತು ರಾಜತಾಂತ್ರಿಕ ಮತ್ತು ಅಧಿಕೃತ ವೀಸಾ ಹೊಂದಿರುವವರನ್ನು ಹೊರತುಪಡಿಸಿ ಎಲ್ಲಾ ಪಾಕಿಸ್ತಾನಿಗಳು ಏಪ್ರಿಲ್ 29 ರೊಳಗೆ ಭಾರತವನ್ನು ತೊರೆಯಬೇಕು ಎಂದು ಸಿಸಿಎಸ್ ನಿರ್ಧರಿಸಿದೆ.

ಸಿಸಿಎಸ್ ನಿರ್ಧಾರದ ನಂತರ, ಏಪ್ರಿಲ್ 25 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ದೇಶವನ್ನು ತೊರೆಯಲು ನಿಗದಿಪಡಿಸಿದ ಗಡುವನ್ನು ಮೀರಿ ಯಾವುದೇ ಪಾಕಿಸ್ತಾನಿ ಭಾರತದಲ್ಲಿ ಉಳಿಯದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ. ನಂತರ, ಕೇಂದ್ರ ಗೃಹ ಕಾರ್ಯದರ್ಶಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸಿದರು ಮತ್ತು ವೀಸಾಗಳನ್ನು ರದ್ದುಗೊಳಿಸಲಾದ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ನಿಗದಿತ ಗಡುವಿನೊಳಗೆ ಭಾರತವನ್ನು ತೊರೆಯುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT