ಖ್ವಾಜಾ ಆಸಿಫ್ 
ದೇಶ

ಭಾರತದಲ್ಲಿ ಪಾಕ್ ರಕ್ಷಣಾ ಸಚಿವರ 'X' ಖಾತೆ ನಿರ್ಬಂಧ

ಕಳೆದ ವಾರ, ಪಾಕಿಸ್ತಾನದ ರಕ್ಷಣಾ ಸಚಿವರು ವೈರಲ್ ಆಗಿರುವ ವಿಡಿಯೋ ಕ್ಲಿಪ್‌ನಲ್ಲಿ ಪಾಕಿಸ್ತಾನ ಉಗ್ರ ಸಂಘಟನೆಗಳಿಗೆ ಬೆಂಬಲ ಮತ್ತು ಹಣಕಾಸು ನೆರವು ನೀಡುತ್ತಿದೆ ಎಂದು ಹೇಳುವ ಮೂಲಕ ತಪ್ಪೊಪ್ಪಿಕೊಂಡಿದ್ದರು.

ನವದೆಹಲಿ: 26 ಪ್ರವಾಸಿಗರನ್ನು ಬಲಿ ಪಡೆದ ಪಹಲ್ಗಾಮ್ ಉಗ್ರ ದಾಳಿಯ ಕೆಲವು ದಿನಗಳ ನಂತರ, ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ X ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ, ಅದರ ಸೇನೆ ಮತ್ತು ಭದ್ರತಾ ಸಂಸ್ಥೆಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ ಹಾಗೂ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಸೋಮವಾರ ಕೇಂದ್ರ ಸರ್ಕಾರ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿತ್ತು. ಇಂದು ಪಾಕ್ ರಕ್ಷಣಾ ಸಚಿವರ X ಖಾತೆಯನ್ನು ನಿರ್ಬಂಧಿಸಲಾಗಿದೆ.

ಕಳೆದ ವಾರ, ಪಾಕಿಸ್ತಾನದ ರಕ್ಷಣಾ ಸಚಿವರು ವೈರಲ್ ಆಗಿರುವ ವಿಡಿಯೋ ಕ್ಲಿಪ್‌ನಲ್ಲಿ ಪಾಕಿಸ್ತಾನ ಉಗ್ರ ಸಂಘಟನೆಗಳಿಗೆ ಬೆಂಬಲ ಮತ್ತು ಹಣಕಾಸು ನೆರವು ನೀಡುತ್ತಿದೆ ಎಂದು ಹೇಳುವ ಮೂಲಕ ತಪ್ಪೊಪ್ಪಿಕೊಂಡಿದ್ದರು.

ಈಗ ವೈರಲ್ ಆಗಿರುವ ವಿಡಿಯೋ ಕ್ಲಿಪ್‌ನಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವರು ಸ್ಕೈ ನ್ಯೂಸ್‌ನ ಯಾಲ್ಡಾ ಹಕೀಮ್ ಅವರೊಂದಿಗೆ ಮಾತನಾಡುತ್ತಿದ್ದಾಗ, ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ಒದಗಿಸುತ್ತಿದೆ ಮತ್ತು ತರಬೇತಿ ನೀಡುವ ದೀರ್ಘ ಇತಿಹಾಸ ಹೊಂದಿದೆ ಎನ್ನುವ ಆರೋಪದ ಬಗ್ಗೆ ನೀವೇನು ಹೇಳುತ್ತೀರಿ ಎಂದು ಕೇಳಿದ್ದಾರೆ. ಇದಕ್ಕೆ ಖ್ವಾಜಾ, ನಾವು ಕಳೆದ ಮೂರು ದಶಕಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸ ಮಾಡುತ್ತಿದ್ದೇವೆ. ಅದು ತಪ್ಪು. ನಾವು ಅದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT