ಸಂಗ್ರಹ ಚಿತ್ರ 
ದೇಶ

ಪಹಲ್ಗಾಮ್ ದಾಳಿಯಿಂದ ಉದ್ವಿಗ್ನತೆ: ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟತನ; ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ, ಸೇನೆ ದಿಟ್ಟ ಉತ್ತರ

ಜಮ್ಮು-ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರ, ಅಖ್ನೂರ್ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ.

ಜಮ್ಮು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹಳಸಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರ, ಅಖ್ನೂರ್ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 28-29ರ ರಾತ್ರಿ, ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಹಾಗೂ ಅಖ್ನೂರ್ ವಲಯದಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಪರಿಣಾಮಕಾರಿ ರೀತಿಯಲ್ಲಿ ಪ್ರತಿಕ್ರಿಯಿಸಿದೆ ಎಂದು ಅವರು ಹೇಳಿದ್ದಾರೆ.

ಉಭಯ ರಾಷ್ಟ್ರಗಳ ಸೇನೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯಾವುದೇ ನೋವುಗಳು ವರದಿಯಾಗಿಲ್ಲ.

ಉತ್ತರ ಕಾಶ್ಮೀರದ ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎಲ್‌ಒಸಿ ಉದ್ದಕ್ಕೂ ಹಲವಾರು ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಯಿಂದ ಪ್ರಾರಂಭಿಸಿದ್ದ ಪಾಕಿಸ್ತಾನವು, ಇದೀಗ ಪೂಂಚ್ ವಲಯ ಮತ್ತು ಅಖ್ನೂರ್‌ನಲ್ಲೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT