ಸುಪ್ರೀಂಕೋರ್ಟ್ 
ದೇಶ

Pegasus: ಸ್ಪೈವೇರ್ ಬಳಸಿದರೆ ತಪ್ಪಿಲ್ಲ! ಯಾರ ವಿರುದ್ಧ ಬಳಸಲಾಗುತ್ತಿದೆ ಎಂಬುದು ಮುಖ್ಯ- ಸುಪೀಂ ಕೋರ್ಟ್

ಪತ್ರಕರ್ತ ಪರಂಜೋಯ್ ಗುಹಾ ಠಾಕುರ್ತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಯುಎಸ್ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿದರು.

ನವದೆಹಲಿ: 'ಭಯೋತ್ಪಾದಕರ ವಿರುದ್ಧ ಸ್ಪೈವೇರ್' ಬಳಸುವುದರಲ್ಲಿ ತಪ್ಪೇನಿದೆ? ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆಶ್ಚರ್ಯ ವ್ಯಕ್ತಪಡಿಸಿದ್ದು, ದೇಶದ ಭದ್ರತೆ ಮತ್ತು ಏಕತೆಗೆ ಧಕ್ಕೆ ತರುವಂತಹ ಯಾವುದೇ ಘಟನೆಗಳನ್ನು ಬಹಿರಂಗ ಮಾಡಬಾರದು ಎಂದು ಹೇಳಿದೆ.

ಗೌಪ್ಯತೆ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು ಆದರೆ ತಾಂತ್ರಿಕ ಸಮಿತಿಯ ವರದಿಯು ಬೀದಿಯಲ್ಲಿ ಚರ್ಚಿಸುವಂತಹ ಯಾವುದೇ ದಾಖಲೆ ಅಲ್ಲ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ದಿನೇಶ್ ದ್ವಿವೇದಿ, ಕೇಂದ್ರ ಸರ್ಕಾರ ಸ್ಪೈವೇರ್ ನ್ನು ಬಳಸುತ್ತಿದೆ ಎಂಬ ಪ್ರಶ್ನೆ ಎದುರಾಗಿದೆ. ಒಂದು ವೇಳೆ ಹೊಂದಿದ್ದರೆ, ಇಂದಿಗೂ ಅದನ್ನು ನಿರಂತರವಾಗಿ ಬಳಕೆಯಿಂದ ತಡೆಯಲು ಏನೂ ಇಲ್ಲ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ದಯವಿಟ್ಟು ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿಗೆ ಸಂಬಂಧಿಸಿದಂತೆ ವಾದಿಸಿ, ಇಂದಿನ ದಿನಗಳಲ್ಲಿ ಇಂತಹ ಸನ್ನಿವೇಶವನ್ನು ನಾವು ಎದುರಿಸುತ್ತಿದ್ದೇವೆ. ನಾವು ಸ್ವಲ್ಪ ಜವಾಬ್ದಾರರಾಗಿರೋಣ... ವರದಿಯನ್ನು ಹೇಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ ಎಂದು ಹೇಳಿತು.

"ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ನೀವು ಯಾರ ವಿರುದ್ಧ ಬಳಸುತ್ತೀರಿ ಎಂಬುದು ಪ್ರಶ್ನೆ. ನೀವು ರಾಷ್ಟ್ರದ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಗೌಪ್ಯತೆಯ ಹಕ್ಕನ್ನು ಹೊಂದಿರುವ ಖಾಸಗಿ ನಾಗರಿಕರಿಗೆ ಸಂವಿಧಾನದ ಅಡಿಯಲ್ಲಿ ರಕ್ಷಣೆ ನೀಡಲಾಗುತ್ತದೆ ಎಂದು ಪೀಠ ಹೇಳಿತು.

ಪತ್ರಕರ್ತ ಪರಂಜೋಯ್ ಗುಹಾ ಠಾಕುರ್ತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಯುಎಸ್ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿದರು. "WhatsApp ಸ್ವತಃ ಇಲ್ಲಿ ಬಹಿರಂಗಪಡಿಸಿದೆ. ಮೂರನೇ ವ್ಯಕ್ತಿ ಅಲ್ಲ. WhatsApp ಸ್ವತಃ ಹ್ಯಾಕ್ ಆಗಿದೆ ಎಂದು ಬಹಿರಂಗಪಡಿಸಿದೆ. ಹ್ಯಾಕಿಂಗ್ ಆಗಿದೆ ಎಂದು ಯಾರೂ ಹೇಳಿಲ್ಲ. ತಜ್ಞರು ಕೂಡ ಹಾಗೆ ಹೇಳಲಿಲ್ಲ ಎಂದರು.

ಈಗ ನಿಮ್ಮ ಬಳಿ ಸಾಕ್ಷ್ಯವಿದೆ. WhatsApp ಮೂಲಕ ಸಾಕ್ಷ್ಯವಿದೆ. ನಾವು ತೀರ್ಪನ್ನು ಪ್ರಸಾರ ಮಾಡುತ್ತೇವೆ. ತಿದ್ದುಪಡಿ ಮಾಡಿದ ಭಾಗವನ್ನು ಸಂಬಂಧಪಟ್ಟವರಿಗೆ ನೀಡಬೇಕು ಎಂದು ಸಿಬಲ್ ಹೇಳಿದರು.

ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ ಮತ್ತು ಅವರು ಖಾಸಗಿತನದ ಹಕ್ಕನ್ನು ಹೊಂದಿರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಅರ್ಜಿದಾರರೊಬ್ಬರ ವಾದ ಮಂಡಿಸಿದ ಪರ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರು, ತಾಂತ್ರಿಕ ಸಮಿತಿಯ ವರದಿಯನ್ನು ಯಾವುದೇ ತಿದ್ದುಪಡಿ ಮಾಡದೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್