ಕಟ್ಟಡದಿಂದ ಕೆಳಗೆ ಹಾರಿದ ಯುವತಿ 
ದೇಶ

Video: ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ

ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್‌ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ.

ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ಅಗ್ನಿಅವಘಡದಲ್ಲಿ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಕಟ್ಟಡದ 5ನೇ ಅಂತಸ್ತಿನಿಂದ ಕೆಳಗೆ ಹಾರಿದ್ದಾರೆ.

ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್‌ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ.

ಯುವತಿ ಕೆಳಗೆ ಹಾರುತ್ತಲೇ ಕೆಳಗೆ ಇದ್ದ ಸುಮಾರು 20-25 ಜನರು ಬಲೆ ಅಥವಾ ಬಟ್ಟೆಯಂತಹ ವಸ್ತುವನ್ನು ಬಲೆ ರೀತಿಯಲ್ಲಿ ಹಿಡಿದುಕೊಂಡಿದ್ದು ಯುವತಿ ನೇರವಾಗಿ ಅದರೊಳಗೆ ಬಿದ್ದಿದ್ದಾಳೆ. ಆ ಮೂಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಬಾಲ್ಕನಿಯಿಂದ ಹಾರಿದ ಹೆಸರಿಸದ ಯುವತಿ, ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಾಗ, ಕಿರುಚುತ್ತಾ ಕೆಳಗೆ ಹಾರಿದ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮತ್ತೊಂದು ವೀಡಿಯೊದಲ್ಲಿ, ಒಬ್ಬ ಮಹಿಳೆ ಉರಿಯುತ್ತಿರುವ ಕಟ್ಟಡದಿಂದ ತಪ್ಪಿಸಿಕೊಳ್ಳಲು ಹಗ್ಗವನ್ನು ಬಳಸುತ್ತಿರುವುದನ್ನು ಕಾಣಬಹುದಾಗಿದೆ.

ಇನ್ನು ಅಗ್ನಿ ಅವಘಡ ಕುರಿತು ಮಾಹಿತಿ ಲಭ್ಯವಾಗುತ್ತಲೇ ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದರು. ಅಪಾರ್ಟ್ಮೆಂಟ್ನ 'ಸಿ' ಮತ್ತು 'ಡಿ' ಬ್ಲಾಕ್ ನಲ್ಲಿ ಬೆಂಕಿ ವ್ಯಾಪಕವಾಗಿ ಹಬ್ಬಿತ್ತು. ಮೂಲಗಳ ಪ್ರಕಾರ ಅಪಾರ್ಟ್ ಮೆಂಟ್ ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಬೆಂಕಿ ಕಟ್ಟಡದ ಇತರೆ ಭಾಗಕ್ಕೆ ವ್ಯಾಪಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!