ನರೇಂದ್ರ ಮೋದಿ online desk
ದೇಶ

ಪಾಕ್ ವಿರುದ್ಧ ಕ್ರಮಕ್ಕೆ ಸರಣಿ ಸಭೆ: PM Modi ರಷ್ಯಾ ಪ್ರವಾಸ ದಿಢೀರ್ ರದ್ದು!

ಉಗ್ರರು, ಪಾಕ್ ವಿರುದ್ಧ ಕಾರ್ಯಾಚರಣೆಗೆ ನೆನ್ನೆ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.

ನವದೆಹಲಿ: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಪಾಕ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರಣಿ ಸಭೆಗಳನ್ನು ನಡೆಸುತ್ತಿದೆ.

ಉಗ್ರರು, ಪಾಕ್ ವಿರುದ್ಧ ಕಾರ್ಯಾಚರಣೆಗೆ ನೆನ್ನೆ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.

ಇಂದು ಸಹ ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಸಂಬಂಧಿಸಿದಂತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಎಲ್ಲಾ ಸಭೆಗಳ ಬಳಿಕ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆಯ ಬಳಿಕ 4 ಗಂಟೆ ವೇಳೆಗೆ ಸುದ್ದಿಗೋಷ್ಠಿ ನಡೆಯಲಿದೆ. ಈ ನಡುವೆ ರಷ್ಯಾ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ ದಿಢೀರ್ ರದ್ದುಗೊಳಿಸಿದ್ದಾರೆ.

ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ವಿರುದ್ಧದ ವಿಜಯದ 80 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ ವಿಜಯ ದಿನಾಚರಣೆ ಅಂಗವಾಗಿ ಅತಿಥಿಯಾಗಿ ಭಾಗಿಯಾಗಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿತ್ತು.

ಮೇ.09 ರಂದು ಮೋದಿ ರಷ್ಯಾಗೆ ತೆರಳಬೇಕಿತ್ತು ಆದರೆ ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವುದರಿಂದ ಮೋದಿ ರಷ್ಯಾ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ್ದಾರೆ.

"ಭಾರತದ ನಾಯಕ ಮೋದಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ, ಭಾರತವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸಲಾಗುವುದಿಲ್ಲ" ಭಾರತವನ್ನು ಬೇರೆ ಮಟ್ಟದಲ್ಲಿ ಪ್ರತಿನಿಧಿಸಲಾಗುವುದು ಎಂದು ರಷ್ಯಾ ಹೇಳಿರುವುದನ್ನು ಸುದ್ದಿ ಸಂಸ್ಥೆ TASS ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ