ರಾಹುಲ್ ಗಾಂಧಿ 
ದೇಶ

ಪಹಲ್ಗಾಮ್‌ ಉಗ್ರ ದಾಳಿ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

"ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ನೆನಪಿನಲ್ಲಿ ಸಂಸತ್ ವಿಶೇಷ ಅಧಿವೇಶನ ಕರೆಯಬೇಕು" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕಾನ್ಪುರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಕಾನ್ಪುರ ನಿವಾಸಿ ಶುಭಂ ದ್ವಿವೇದಿ ಅವರ ಕುಟುಂಬವನ್ನು ಲೋಕಸಭಾ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿಯಾದರು.

"ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ನೆನಪಿನಲ್ಲಿ ಸಂಸತ್ ವಿಶೇಷ ಅಧಿವೇಶನ ಕರೆಯಬೇಕು" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನಿನ್ನೆ ತಮ್ಮ ಸಂಸದೀಯ ಕ್ಷೇತ್ರವಾದ ರಾಯ್‌ಬರೇಲಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಇಂದು ತಮ್ಮ ಈ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೇಠಿಗೆ ಭೇಟಿ ನೀಡಿದರು. ಬಳಿಕ ಕಾನ್ಪುರಕ್ಕೆ ತೆರಳಿ, ದಿವಂಗತ ಶುಭಂ ದ್ವಿವೇದಿ ಅವರ ಮನೆಗೆ ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

SCROLL FOR NEXT