ರಕ್ಷಣಾ ಸಚಿವ ರಾಜನಾಥ್ ಸಿಂಗ್ online desk
ದೇಶ

ರಷ್ಯಾದ ವಿಜಯ ದಿವಸ್ ಪರೇಡ್‌ನಲ್ಲಿ ಮೋದಿ ಬದಲು ರಾಜನಾಥ್ ಸಿಂಗ್ ಭಾಗಿ

ಮೇ 9 ರಂದು ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಷ್ಯಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.

ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ವಿರುದ್ಧ ಸೋವಿಯತ್ ವಿಜಯದ 80ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ ವಿಜಯ ದಿವಸ್ ಪರೇಡ್ ನಲ್ಲಿ ಅತಿಥಿಯಾಗಿ ಭಾಗವಹಿಸಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿತ್ತು.

ಆದರೆ ಮೋದಿ ರಷ್ಯಾ ಪ್ರವಾಸ ರದ್ದುಗೊಳಿಸಿದ್ದು, ಮೇ 9 ರಂದು ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಮೇ 9 ರಂದು ಮಾಸ್ಕೋದಲ್ಲಿ ನಡೆಯಲಿರುವ ಪರೇಡ್ ನಲ್ಲಿ ಭಾಗವಹಿಸಲು ಮೋದಿ ರಷ್ಯಾಗೆ ತೆರಳಬೇಕಿತ್ತು ಆದರೆ ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವುದರಿಂದ ಮೋದಿ ರಷ್ಯಾ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!