ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪ್ರಸ್ತುತ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಜೂನ್ ಕೊನೆಯ ವಾರದಲ್ಲಿ ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿಬು ಸೊರೇನ್ ಅವರು ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ರಾಷ್ಟ್ರ ರಾಜಧಾನಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ತಂದೆ, 81 ವರ್ಷದ ಶಿಬು ಸೊರೇನ್ ಅವರು ದೀರ್ಘಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಆರೋಗ್ಯ ಸಮಸ್ಯೆಗಳನ್ನು ಪ್ರಸ್ತುತ ಪರಿಶೀಲಿಸಲಾಗುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೋನ್ ಅವರು ಜೂನ್ 24 ರಂದು ಅವರ ತಂದೆಯನ್ನು ಗಂಗಾ ರಾಮ್ ಆಸ್ಪತ್ರೆ ದಾಖಲಿಸಿದಾಗ ಹೇಳಿದ್ದರು.
ಏತನ್ಮಧ್ಯೆ, ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೋನ್ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ಅವರನ್ನೂ ದೆಹಲಿಯ ಅಪೋಲೋ ಆಸ್ಪತ್ರೆಗೆ ವಿಮಾನದ ಮೂಲಕ ಸಾಗಿಸಲಾಯಿತು ಎಂದು ಮೂಲಗಳು ತಿಳಿಸಿವೆ.