ಅರುಣ್ ಜೇಟ್ಲಿ-ರಾಹುಲ್ ಗಾಂಧಿ 
ದೇಶ

Rahul gandhi ಎಡವಟ್ಟು: ದಿವಂಗತ ಅರುಣ್ ಜೇಟ್ಲಿ ಬಗ್ಗೆ 'ನಾಚಿಕೆಗೇಡಿನ' ಹೇಳಿಕೆ; ಜಾಗರೂಕರಾಗಿ ಎಂದು ರೋಹನ್ ಜೇಟ್ಲಿ ಕಿಡಿ!

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದಿವಂಗತ ಕೇಂದ್ರ ಸಚಿವ ಅರುಣ್ ಜೇಟ್ಲಿ ಬಗ್ಗೆ ಅನಗತ್ಯ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ದೆಹಲಿ ಸರ್ಕಾರದ ಸಂಪುಟ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ, ರಾಹುಲ್ ಗಾಂಧಿಗೆ ಏನಾದರೂ ಹೇಳುವ ಮೊದಲು ಜಾಗರೂಕರಾಗಿರಿ ಎಂದು ಸಲಹೆ ನೀಡಿದ್ದಾರೆ.

ರಾಹುಲ್ ಗಾಂಧಿ ಈಗ ತುಂಬಾ ಕೀಳು ಮಟ್ಟದ ರಾಜಕೀಯ ಮಾಡಲು ಪ್ರಾರಂಭಿಸಿದ್ದಾರೆ ಎಂದು ಮಂಜಿಂದರ್ ಸಿಂಗ್ ಸಿರ್ಸಾ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಗೌರವಾನ್ವಿತ ನಾಯಕ ದಿವಂಗತ ಅರುಣ್ ಜೇಟ್ಲಿ ಅವರ ಹೆಸರನ್ನು ಎಳೆದು ತರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ. ಏಕೆಂದರೆ 2020ರಲ್ಲಿ ಕೃಷಿ ಕಾನೂನು ಅಂಗೀಕರಿಸುವ ಸಮಯದಲ್ಲಿ ಅರುಣ್ ಜೇಟ್ಲಿ ದಿವಂಗತರಾಗಿದ್ದರು. ಸುಳ್ಳುಗಳನ್ನು ಹರಡಿದ್ದಕ್ಕಾಗಿ ಮತ್ತು ದೇಶಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಅರುಣ್ ಜೇಟ್ಲಿಯನ್ನು ಅಗೌರವಿಸಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಪುತ್ರ ರೋಹನ್ ಜೇಟ್ಲಿ, ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ ಎಕ್ಸ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಕೃಷಿ ಕಾನೂನುಗಳ ಕುರಿತು ಅರುಣ್ ಜೇಟ್ಲಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ನನ್ನ ತಂದೆ ಅರುಣ್ ಜೇಟ್ಲಿ 2019ರಲ್ಲಿ ನಿಧನರಾಗಿದ್ದರು. ಕೃಷಿ ಕಾನೂನುಗಳನ್ನು 2020ರಲ್ಲಿ ಅಂಗೀಕರಿಸಲಾಯಿತು ಎಂಬುದನ್ನು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ. ನನ್ನ ತಂದೆ ಅರುಣ್ ಜೇಟ್ಲಿ ಯಾರನ್ನೂ ಬೆದರಿಸುವ ಸ್ವಭಾವ ಹೊಂದಿರಲಿಲ್ಲ. ಅವರು ಕಟ್ಟಾ ಪ್ರಜಾಪ್ರಭುತ್ವವಾದಿ ವ್ಯಕ್ತಿ. ಸಮಸ್ಯೆ ನಿವಾರಣೆಗಾಗಿ ಮುಕ್ತ ಚರ್ಚೆಗೆ ಕರೆ ನೀಡುತ್ತಿದ್ದರು. ಇಂದು ನಮ್ಮೊಂದಿಗೆ ಇಲ್ಲದವರ ಬಗ್ಗೆ ಮಾತನಾಡುವಾಗ ರಾಹುಲ್ ಗಾಂಧಿಯವರು ಜಾಗರೂಕರಾಗಿರಬೇಕು ಎಂದು ನಾನು ಸಲಹೆ ನೀಡುತ್ತೇನೆ. ಮನೋಹರ್ ಪರಿಕ್ಕರ್ ಅವರೊಂದಿಗೆ ರಾಹುಲ್ ಗಾಂಧಿ ಕೂಡ ಇದೇ ರೀತಿಯದ್ದನ್ನು ಮಾಡಲು ಪ್ರಯತ್ನಿಸಿದ್ದರು ಎಂದು ರೋಹನ್ ಜೇಟ್ಲಿ ಹೇಳಿದ್ದಾರೆ.

2020ರಲ್ಲಿ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅರುಣ್ ಜೇಟ್ಲಿ ಅವರನ್ನು ಬೆದರಿಕೆ ಹಾಕಲು ಕಳುಹಿಸಲಾಗಿತ್ತು ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ. ದೆಹಲಿಯಲ್ಲಿ 2025ರ ವಾರ್ಷಿಕ ಕಾನೂನು ಸಮ್ಮೇಳನದಲ್ಲಿ ರಾಹುಲ್ ಈ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಅರುಣ್ ಜೇಟ್ಲಿ ನಡುವೆ ಅನೇಕ ಬಿಸಿ ಚರ್ಚೆಗಳು ನಡೆದಿವೆ. ವಿಶೇಷವಾಗಿ ರಫೇಲ್ ಒಪ್ಪಂದ ಮತ್ತು ವಿಜಯ್ ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಉದಾಹರಣೆಗೆ, 2018ರಲ್ಲಿ, ರಾಹುಲ್ ಅವರು ಅರುಣ್ ಜೇಟ್ಲಿ ಅವರು ಮಲ್ಯ ಅವರೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು. ಅದನ್ನು ಜೇಟ್ಲಿ ಕೂಡ ತಿರಸ್ಕರಿಸಿದರು. ಅದೇ ಸಮಯದಲ್ಲಿ 2019ರಲ್ಲಿ ರಾಹುಲ್ ರಫೇಲ್ ಒಪ್ಪಂದದಲ್ಲಿ ಅಕ್ರಮಗಳ ಆರೋಪ ಮಾಡಿದ್ದು ಇದನ್ನು ಅರುಣ್ ಜೇಟ್ಲಿ ಸುಳ್ಳಿನ ಪ್ರಚಾರ ಎಂದು ಕರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT