ಏರ್ ಇಂಡಿಯಾ ವಿಮಾನ ಸಾಂದರ್ಭಿಕ ಚಿತ್ರ 
ದೇಶ

ತಾಂತ್ರಿಕ ದೋಷ: ಸಿಂಗಾಪುರ- ಚೆನ್ನೈ ಏರ್ ಇಂಡಿಯಾ ವಿಮಾನ ಹಾರಾಟ ರದ್ದು!

ಭಾನುವಾರವೂ ತಾಂತ್ರಿಕ ದೋಷದಿಂದಾಗಿ ಸಿಂಗಾಪುರದಿಂದ ಚೆನ್ನೈಗೆ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಏರ್ ಇಂಡಿಯಾದ ಕೆಲವು ವಿಮಾನಗಳಲ್ಲಿ ತಾಂತ್ರಿಕ ದೋಷ ಹೆಚ್ಚಾಗಿ ಕಂಡುಬರುತ್ತಿವೆ.

ಭಾನುವಾರವೂ ತಾಂತ್ರಿಕ ದೋಷದಿಂದಾಗಿ ಸಿಂಗಾಪುರದಿಂದ ಚೆನ್ನೈಗೆ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ.

A321 ವಿಮಾನದ ಬದಲಿಗೆ AI 349 ವಿಮಾನ ಚೆನ್ನೈಗೆ ತೆರಳಬೇಕಾಗಿತ್ತು. ಆದರೆ ನಿರ್ವಹಣಾ ಕಾರ್ಯದಿಂದಾಗಿ ಸಿಂಗಾಪುರದಿಂದ ಚೆನ್ನೈಗೆ ಹೊರಡಬೇಕಿದ್ದ AI349 ವಿಮಾನವನ್ನು ರದ್ದುಗೊಳಿಸಲಾಗಿದೆ. ಸರಿಪಡಿಸಲು ಹೆಚ್ಚುವರಿ ಸಮಯ ಬೇಕಾಗುತ್ತದೆ ಎಂದು ಏರ್‌ಲೈನ್ಸ್ ತಿಳಿಸಿದೆ.

"ಪ್ರಯಾಣಿಕರು ಆದಷ್ಟು ಬೇಗ ಚೆನ್ನೈ ತಲುಪಲು ವ್ಯವಸ್ಥೆ ಮಾಡಲಾಗುವುದು. ಹೋಟೆಲ್ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಸಂಪೂರ್ಣ ಮರುಪಾವತಿ ಅಥವಾ ಮರು ವೇಳಾಪಟ್ಟಿಯಲ್ಲಿ ಸಂಚರಿಸುವ ಆಯ್ಕೆಯನ್ನು ಪ್ರಯಾಣಿಕರಿಗೆ ನೀಡಲಾಗುವುದು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ.

ಈ ಅನಿರೀಕ್ಷಿತ ಅಡಚಣೆಯಿಂದಾಗಿ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲತೆ ಕಡಿಮೆ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಏರ್ ಲೈನ್ಸ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

Microsoft ತಾಂತ್ರಿಕ ಸಿಬ್ಬಂದಿ ಹೆಸರಲ್ಲಿ ಅಮೆರಿಕನ್ನರಿಗೆ ವಂಚನೆ: ಬೆಂಗಳೂರಿನಲ್ಲಿ 21 ಮಂದಿ ಬಂಧನ

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್ ನ ಹೊಸ ಚಿತ್ರದ 'ಟೈಟಲ್' ಅನಾವರಣ!Video

ನೌಗಮ್ ಠಾಣಾ ಸ್ಫೋಟ: ರಸಾಯನಶಾಸ್ತ್ರ ಮತ್ತು ನಿರ್ಲಕ್ಷ್ಯಗಳ ದುರಂತ ಸಂಗಮ

SCROLL FOR NEXT