ಪಶ್ಚಿಮ ಬಂಗಾಳ ಪೊಲೀಸರ ಸಾಂದರ್ಭಿಕ ಚಿತ್ರ 
ದೇಶ

West Bengal: ಅಕ್ರಮವಾಗಿ ಭಾರತ ಪ್ರವೇಶಿಸಿ, 'ಸಾಧು' ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶದ ಕ್ರಿಮಿನಲ್ ಬಂಧನ!

ಬಂಧಿತನನ್ನು 60 ವರ್ಷದ ಮೊಹಮ್ಮದ್ ಹಾಷೆಮ್ ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಲ್ಲಿ ಹಲವಾರು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದು, ಹಶೀಮ್ ಅಲಿ ಮಲ್ಲಿಕ್ ಎಂದು ಹೆಸರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಾಡಿಯಾ: ಅಕ್ರಮವಾಗಿ ಭಾರತಕ್ಕೆ ಬಂದು ಸಾಧು ಸೋಗಿನಲ್ಲಿ ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶದ ಓರ್ವ ಕ್ರಿಮಿನಲ್ ನನ್ನು ನಾಡಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ಸ್ಥಳೀಯ ಪೊಲೀಸರೊಂದಿಗೆ ಶನಿವಾರ ರಾತ್ರಿ ತೆಹಟ್ಟಾ ಪ್ರದೇಶದಲ್ಲಿ ದಾಳಿ ನಡೆಸಿದ ಪಶ್ಚಿಮ ಬಂಗಾಳದ STF ಪಡೆ ಆರೋಪಿಯನ್ನು ಬಂಧಿಸಿದೆ.

ಬಂಧಿತನನ್ನು 60 ವರ್ಷದ ಮೊಹಮ್ಮದ್ ಹಾಷೆಮ್ ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಲ್ಲಿ ಹಲವಾರು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದು, ಹಶೀಮ್ ಅಲಿ ಮಲ್ಲಿಕ್ ಎಂದು ಹೆಸರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ವಿಶೇಷ ಕಾರ್ಯಪಡೆಯ ಸಬ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಅಬ್ದುನ್ ನೂರ್ ಚೌಧರಿ ಅವರು ನೀಡಿದ ದೂರಿನ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾಷೇಮ್ ಬಾಂಗ್ಲಾದೇಶದಲ್ಲಿ ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಲಾಗಿದೆ. ಆತ ಭಾರತದ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ತೆಹಟ್ಟಾದ ಬಲಿಯುರಾ ಪುರ್ಬಾ ಪಾರಾದಲ್ಲಿ ತಲೆಮರೆಸಿಕೊಂಡಿದ್ದ. ಆತನ ಬಗ್ಗೆ ಮಾಹಿತಿ ಇತ್ತು. ಸ್ಥಳೀಯ ಪೊಲೀಸರ ಸಹಾಯದಿಂದ ದಾಳಿ ನಡೆಸಿ ಶನಿವಾರ ಸಂಜೆ ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಭಾರತದ ಮಾನ್ಯವಾದ ಗುರುತಿನ ದಾಖಲೆ ನೀಡುವಲ್ಲಿ ವಿಫಲನಾದ ನಂತರ ಬಂಧಿಸಲಾಯಿತು. ಪ್ರಾಥಮಿಕ ತನಿಖೆಯ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಮಾಡಿರುವ ಅಪರಾಧಗಳಿಗಾಗಿ ಅಲ್ಲಿನ ಕಾನೂನು ಪ್ರಕ್ರಿಯೆಗಳಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ ಬಂದು ನೆಲೆಸಿರುವುದಾಗಿ ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಜವಹರಲಾಲ್ ನೆಹರೂ ಅವರ ಏಕಪಕ್ಷೀಯ ಕದನ ವಿರಾಮ PoK ಸೃಷ್ಟಿಗೆ ಕಾರಣವಾಯಿತು': ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಅನ್ನಭಾಗ್ಯ ಯೋಜನೆ; ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..!

Shakthi Scheme Record-'ಶಕ್ತಿ ಯೋಜನೆ'ಗೆ ಸಿಕ್ಕಿತು ವಿಶ್ವ ಮನ್ನಣೆ: ಲಂಡನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ

ಬಿಜೆಪಿ ನಾಯಕರು ಯಾರೂ ನನ್ನನ್ನು ಜೈಲಿಗೆ ಹೋಗು ಎಂದು ಹೇಳಿಲ್ಲ: ಪ್ರಶ್ನಿಸಿದರೆ ಸದನದಲ್ಲಿ ಅಧಿಕಾರಿಯ ಹೆಸರು ಹೇಳುವೆ; ಡಿಕೆಶಿ ಸ್ಪಷ್ಟನೆ

SCROLL FOR NEXT