ಸತ್ಯೇಂದರ್ ಜೈನ್ 
ದೇಶ

ಭ್ರಷ್ಟಾಚಾರ ಪ್ರಕರಣ: ಸತ್ಯೇಂದರ್ ಜೈನ್ ಗೆ CBI ಕ್ಲೀನ್ ಚಿಟ್; ಕ್ಲೋಶರ್ ರಿಪೋರ್ಟ್​ ಗೆ ಕೋರ್ಟ್ ಒಪ್ಪಿಗೆ

2018ರಲ್ಲಿ ಇಲಾಖೆಗೆ ಸೃಜನಶೀಲ ತಂಡವನ್ನು ನೇಮಿಸಿಕೊಳ್ಳುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಜೈನ್ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದರ್ ಜೈನ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದ್ದು, ದೆಹಲಿ ಮಾಜಿ ಪಿಡಬ್ಲ್ಯೂಡಿ ಸಚಿವರು ಮತ್ತು ಇತರರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ವಿಶೇಷ ನ್ಯಾಯಾಲಯ ಸೋಮವಾರ ಅಂಗೀಕರಿಸಿದೆ.

2018ರಲ್ಲಿ ಇಲಾಖೆಗೆ ಸೃಜನಶೀಲ ತಂಡವನ್ನು ನೇಮಿಸಿಕೊಳ್ಳುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಜೈನ್ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ 'ತನಿಖೆಯಲ್ಲಿ ಯಾವುದೇ ಕ್ರಿಮಿನಲ್ ಚಟುವಟಿಕೆ ಅಥವಾ ಸರ್ಕಾರಕ್ಕೆ ನಷ್ಟವಾಗಿರುವುದು ಕಂಡುಬಂದಿಲ್ಲ' ಎಂದು ಸಿಬಿಐ ಕ್ಲೋಸರ್ ರಿಪೋರ್ಟ್ ಸಲ್ಲಿಸಿದೆ.

ತನಿಖಾ ಸಂಸ್ಥೆಯು ಇಷ್ಟು ದೀರ್ಘಾವಧಿಯವರೆಗೆ ಯಾವುದೇ ಅಪರಾಧ ಸಾಬೀತಾಗುವಂತಹ ಪುರಾವೆಗಳನ್ನು ಕಂಡುಕೊಂಡಿಲ್ಲ ಮತ್ತು ಮುಂದಿನ ಕ್ರಮಗಳು ಯಾವುದೇ ಉಪಯುಕ್ತ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ವಿಶೇಷ ನ್ಯಾಯಾಧೀಶ ಡಿಗ್ ವಿನಯ್ ಸಿಂಗ್ ಅವರು ಹೇಳಿದ್ದಾರೆ.

ಪಿಡಬ್ಲ್ಯೂಡಿ ಕೆಲಸಗಳಿಗಾಗಿ ಸೃಜನಶೀಲ ತಂಡ ನೇಮಿಸಿಕೊಳ್ಳಲು ಖಾಸಗಿ ಕಂಪನಿಗೆ ಟೆಂಡರ್ ನೀಡುವಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಉಲ್ಲೇಖದ ಮೇರೆಗೆ ಸಿಬಿಐ ಮೇ 28, 2018 ರಂದು ಪ್ರಕರಣ ದಾಖಲಿಸಿತ್ತು.

ಈಗ ನಾಲ್ಕು ವರ್ಷಗಳ ನಂತರ, ಸಿಬಿಐ ಈ ಪ್ರಕರಣದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಿದ್ದು, 'ಆರ್ಥಿಕ ಲಾಭ, ಪಿತೂರಿ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪುರಾವೆಗಳಿಲ್ಲ' ಎಂದು ಒತ್ತಿಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ