ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ.
ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನು ಜೂನ್ ಕೊನೆಯ ವಾರದಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಯಿಸಲಾಗಿತ್ತು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕ ಪೋಷಕರಾಗಿರುವ ಶಿಬು ಸೊರೆನ್ 38 ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದರು. ಅಲ್ಲದೆ ಜಾರ್ಖಂಡ್‌ನಲ್ಲಿ ಮೂರೂ ಭಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
2005 ರಲ್ಲಿ ಮೊದಲ ಬಾರಿಗೆ 10 ದಿನಗಳ ಕಾಲ ಸೇವೆ ಸಲ್ಲಿಸಿದ್ದರೆ ನಂತರ 2008 ರಿಂದ 2009 ರವರೆಗೆ ಎರಡನೇ ಬಾರಿ ಮುಖ್ಯಮಂತ್ರಿಯಾದರೆ, 2009 ರಿಂದ 2010 ರವರೆಗೆ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸಿದ್ದರು.