ರಾಹುಲ್ ಗಾಂಧಿ ಮತ್ತು ಸುಪ್ರೀಂ ಕೋರ್ಟ್ 
ದೇಶ

'ಚೀನಾ ಭಾರತದ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು?; ನೀವು ನಿಜವಾದ ಭಾರತೀಯರಾಗಿದ್ದರೆ....' Rahul Gandhi ಗೆ ಸುಪ್ರೀಂ ಕೋರ್ಟ್ ತರಾಟೆ!

ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ನವದೆಹಲಿ: ಚೀನಾ ಸೇನೆ ಭಾರತದ ಸುಮಾರು 2 ಸಾವಿರ ಕಿಮೀ ಭೂಮಿ ಕಬಳಿಸಿದೆ ಎಂದು ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಫುಲ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಚಾರ ನಿಮಗೆ ಹೇಗೆ ಗೊತ್ತಿತ್ತು? ಎಂದು ಪ್ರಶ್ನಿಸಿದೆ.

ಹೌದು.. ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ಎಂದು ಪ್ರಶ್ನೆ ಮಾಡಿರುವ ಕೋರ್ಟ್‌, ನೀವು ನಿಜವಾದ ಭಾರತೀಯರಾಗಿದ್ದರೆ ಇದನ್ನು ಹೇಳುವುದಿಲ್ಲ ಎಂದು ಕಿಡಿಕಾರಿದೆ.

ಭಾರತೀಯ ಸೇನೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಹುಲ್‌ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.

2000 ಕಿ.ಮೀ. ಭಾರತದ ಭೂಮಿಯನ್ನು ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಇದನ್ನೆಲ್ಲಾ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ದತ್ತ ಅವರು ಹೇಳಿದ್ದಾರೆ.

ಆದಾಗ್ಯೂ, ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು, ಜೂನ್ 2020 ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯ ಕುರಿತಾದ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

2,000 ಚದರ ಕಿ.ಮೀ. ಭಾರತೀಯ ಪ್ರದೇಶವನ್ನು ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದರು ಮತ್ತು 'ಶರಣಾಗತಿ'ಗೆ ನರೇಂದ್ರ ಮೋದಿ ಸರ್ಕಾರವನ್ನು ದೂಷಿಸಿದ್ದರು.

ಇನ್ನು ಕಾಂಗ್ರೆಸ್ ನಾಯಕನ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, "ಅವರು ಈ ವಿಷಯಗಳನ್ನು ಹೇಳಲು ಸಾಧ್ಯವಾಗದಿದ್ದರೆ... ಅವರು ವಿರೋಧ ಪಕ್ಷದ ನಾಯಕರಾಗಲು ಹೇಗೆ ಸಾಧ್ಯ?" ಎಂದು ಪ್ರಶ್ನಿಸಿದರು.

ಈ ವೇಳೆ ಇದಕ್ಕೂ ಗರಂ ಆದ ನ್ಯಾಯಾಧೀಶರು, "ಹಾಗಾದರೆ ನೀವು ಸಂಸತ್ತಿನಲ್ಲಿ ಏಕೆ ಅಂತಹ ವಿಷಯಗಳನ್ನು ಹೇಳಬಾರದು. ಸಾಮಾಜಿಕ ಮಾಧ್ಯಮದಲ್ಲಿ ಏಕೆ ಹೇಳಬೇಕು?" ಎಂದು ಕೇಳಿದರು.

ಅಂದಹಾಗೆ ಲಕ್ನೋದಲ್ಲಿ ಚುನಾಯಿತ ಪ್ರತಿನಿಧಿಗಳಿಗಾಗಿ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಅನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಮೇ ತಿಂಗಳಲ್ಲಿ ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women's World Cup 2025: ಭಾರತ vs ಪಾಕಿಸ್ತಾನ ನಡುವೆ ಹ್ಯಾಂಡ್‌ಶೇಕ್ ಇಲ್ಲ; ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ

Couple Romance: ರೈಲಿನಲ್ಲಿ ಜನರ ಎದುರೆ ಒಬ್ಬರಿಗೊಬ್ಬರು ತಬ್ಬಿಕೊಂಡು ಚುಂಬಿಸಿ ಯುವಜೋಡಿ; ಮುಜುಗರಕ್ಕೀಡಾದ ಪ್ರಯಾಣಿಕರು, Video!

ಡೆಲಿವರಿಗೆ ಬಂದು ಎದೆ ಮುಟ್ಟಿದ Blinkit ಏಜೆಂಟ್! ಯುವತಿ ಆರೋಪವೇನು? Video Viral

Cricket: ಕೇವಲ 141 ಎಸೆತಗಳಲ್ಲಿ ಬರೊಬ್ಬರಿ 314 ರನ್ ಚಚ್ಚಿದ ಭಾರತ ಮೂಲದ ಆಸಿಸ್ ಕ್ರಿಕೆಟಿಗ Harjas Singh, ಇತಿಹಾಸ ನಿರ್ಮಾಣ!

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೀಕರ ಭೂಕುಸಿತದಲ್ಲಿ 14 ಸಾವು, ಸಿಕ್ಕಿಂ ಸಂಪರ್ಕ ಕಡಿತ

SCROLL FOR NEXT