ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜ್ಯಕ್ಕೆ 46,933 ಕೋಟಿ ರೂ ತೆರಿಗೆ ಹಣ ಬಿಡುಗಡೆ: ಕೇಂದ್ರ ಹಣಕಾಸು ಸಚಿವ ಪಂಕಜ್ ಚೌಧರಿ

2022-23ರಲ್ಲಿ 34,596 ಕೋಟಿ ರೂ. ಹಾಗೂ 2023-24ರಲ್ಲಿ 41,193 ಕೋಟಿ ರೂ. ಬಿಡುಗಡೆಗೊಳಿಸಲಾಗಿತ್ತು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ.

ತೆರಿಗೆ — online desk
Srinivas Rao BV
Updated On : 5 Aug 2025, 11:31 pm

ನವದೆಹಲಿ: 2024-25ನೇ ಹಣಕಾಸು ವರ್ಷದಲ್ಲಿ ಸುಂಕ ಮತ್ತು ಕೇಂದ್ರ ತೆರಿಗೆಗಳಲ್ಲಿ ಕರ್ನಾಟಕ ರಾಜ್ಯಕ್ಕೆ 46,933 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಕೇಳಿದ ಪ್ರಶ್ನೆಗೆ ಲಖಿತ ಉತ್ತರ ನೀಡಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, 2022-23ರಲ್ಲಿ 34,596 ಕೋಟಿ ರೂ. ಹಾಗೂ 2023-24ರಲ್ಲಿ 41,193 ಕೋಟಿ ರೂ. ಬಿಡುಗಡೆಗೊಳಿಸಲಾಗಿತ್ತು ಎಂದುತಿಳಿಸಿದ್ದಾರೆ.

Also Read

ಆಸ್ತಿ ತೆರಿಗೆ ಬಾಕಿ ಪಾವತಿಸದ 3.75 ಲಕ್ಷ ಸುಸ್ತಿದಾರಿಗೆ ನೋಟೀಸ್ ಜಾರಿಗೆ BBMP ಮುಂದು..!

ಸ್ಥಳೀಯ ಸಂಸ್ಥೆಗಳು, ವಿಪತ್ತು ನಿರ್ವಹಣೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಕ್ರಮವಾಗಿ 426 ಕೋಟಿ ರೂ., 3532 ಕೋಟಿ ರೂ. ಹಾಗೂ 826 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement