ಸತ್ಯಪಾಲ್ ಮಲಿಕ್  
ದೇಶ

ಜಮ್ಮು-ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮಧ್ಯಾಹ್ನ 1.10 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ 79 ವರ್ಷದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಮಂಗಳವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮಧ್ಯಾಹ್ನ 1.10 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಮಲಿಕ್ ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ 10 ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿಯೇ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿತು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಹಾಗೂ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

ಐದು ದಶಕಗಳಿಗೂ ಹೆಚ್ಚು ಕಾಲ ವಿವಿಧ ಪಕ್ಷಗಳಲ್ಲಿ ಮತ್ತು ವಿವಿಧ ರಾಜ್ಯಗಳಲ್ಲಿ ತಮ್ಮ ರಾಜಕೀಯ ಜೀವನ ನಡೆಸಿದ್ದಾರೆ. ಮಲಿಕ್, ಮೊದಲು ಮಾಜಿ ಪ್ರಧಾನಿ ಚರಣ್ ಸಿಂಗ್ ಸ್ಥಾಪಿಸಿದ ಭಾರತೀಯ ಕ್ರಾಂತಿ ದಳದೊಂದಿಗೆ ಬಾಗ್‌ಪತ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ನಂತರ 1980 ಮತ್ತು 1989 ರ ನಡುವೆ ಉತ್ತರ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದರು. 1989 ರಲ್ಲಿ ಜನತಾ ದಳದ ಟಿಕೆಟ್‌ನಲ್ಲಿ ಅಲಿಗಢದಿಂದ ಲೋಕಸಭೆಗೆ ಆಯ್ಕೆಯಾದರು.

ಮಲಿಕ್ ಅವರನ್ನು 2012 ರಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು ಮತ್ತು 2014 ರಲ್ಲಿ ಮರುನೇಮಕ ಮಾಡಲಾಯಿತು.

ಮಲಿಕ್ ತಮ್ಮ ಸಾರ್ವಜನಿಕ ಜೀವನದ ಅಂತಿಮ ಹಂತದಲ್ಲಿ ಹಲವಾರು ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದರು. 2017 ರಲ್ಲಿ ಬಿಹಾರದ ರಾಜ್ಯಪಾಲರಾಗಿ ನೇಮಕಗೊಂಡರು, 2018 ರಲ್ಲಿ ಒಡಿಶಾದ ಹೆಚ್ಚುವರಿ ಉಸ್ತುವಾರಿ ವಹಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಟ್ರಂಪ್ ಹುಚ್ಚಾಟ: ಇದೀಗ ವಿದೇಶಿ ಸಿನಿಮಾಗಳ ಮೇಲೆ ಶೇ. 100ರಷ್ಟು ಸುಂಕ; ಕಾಂತಾರ 2 ಚಿತ್ರದ ಕಥೆಯೇನು?

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?

Ceasefire offer: ನಕ್ಸಲೀಯರೊಂದಿಗೆ 'ಕದನ ವಿರಾಮ' ಘೋಷಣೆಗೆ ಕೇಂದ್ರ ಸರ್ಕಾರವೇಕೆ ಒಪ್ಪುತ್ತಿಲ್ಲ?- ಡಿ. ರಾಜಾ

Karur stampede: ಟಿವಿಕೆಯ ಪ್ರಮುಖ ಪದಾಧಿಕಾರಿಗಳ ವಿರುದ್ಧ FIR, ಸದ್ಯಕ್ಕೆ ವಿಜಯ್ ಪಾರು!

SCROLL FOR NEXT